ಘಾಟಿ ಸುಬ್ರಹ್ಮಣ್ಯ: 62.47 ಲಕ್ಷ ಕಾಣಿಕೆ ಸಂಗ್ರಹ

| Published : Jan 01 2024, 01:15 AM IST

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಕಾಣಿಕೆ ಹಣ ಎಣಿಕೆ ನಡೆದಿದ್ದು, 62,47,075 ರುಪಾಯಿ ನಗದು ಕಾಣಿಕೆ ಸಂಗ್ರಹವಾಗಿದೆ.

ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಕಾಣಿಕೆ ಹಣ ಎಣಿಕೆ ನಡೆದಿದ್ದು, 62,47,075 ರುಪಾಯಿ ನಗದು ಕಾಣಿಕೆ ಸಂಗ್ರಹವಾಗಿದೆ. ಒಂದೂವರೆ ಕೆಜಿ ಬೆಳ್ಳಿ ಆಭರಣ ಸಂಗ್ರಹವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ‌. ಹುಂಡಿ ಎಣಿಕೆ‌ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ‌ ಅಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಸೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್‌ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ‌ ಸಿಬ್ಬಂದಿ ಭಾಗವಹಿಸಿದ್ದರು.