ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ 65.65 ಲಕ್ಷ ಸಂಗ್ರಹ

| Published : Aug 30 2025, 01:00 AM IST

ಘಾಟಿ ಸುಬ್ರಹ್ಮಣ್ಯ ಹುಂಡಿ ಎಣಿಕೆ 65.65 ಲಕ್ಷ ಸಂಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಮಾಸಿಕ ಹುಂಡಿ ಹಣ ಎಣಿಕೆ ಪ್ರಕ್ರಿಯೆ ನಡೆಸಲಾಯಿತು.

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಮಾಸಿಕ ಹುಂಡಿ ಹಣ ಎಣಿಕೆ ಪ್ರಕ್ರಿಯೆ ನಡೆಸಲಾಯಿತು. ಈ ಬಾರಿ ಹುಂಡಿಯಲ್ಲಿ ಒಟ್ಟು ₹65,65,445 ನಗದು, 1.6 ಕೆ.ಜಿ ಬೆಳ್ಳಿ, 700 ಮಿ.ಗ್ರಾಂ ಬಂಗಾರದ ವಡವೆಗಳು ಸಂಗ್ರಹವಾಗಿದ್ದವು. ದೇವಾಲಯದ ಭಕ್ತಾದಿಗಳಿಗೂ ಹುಂಡಿ ಹಣ ಎಣಿಕೆಗೆ ಅವಕಾಶ ನೀಡಲಾಗಿತ್ತು. ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್‍, ಉಪ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಸೀಲ್ದಾರ್ ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ನಂಜಪ್ಪ, ಪ್ರಾಧಿಕಾರದ ಸದಸ್ಯರಾದ ಜೆ.ಎನ್. ರಂಗಪ್ಪ, ಎಸ್. ರವಿ, ಲಕ್ಷ್ಮನಾಯಕ್, ಆರ್.ವಿ. ಮಹೇಶ್ ಕುಮಾರ್, ಹೇಮಲತಾ, ರಮೇಶ್, ಪೊಲೀಸ್ ಇಲಾಖೆ, ಬ್ಯಾಂಕ್‌ ಹಾಗೂ ದೇವಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.