ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ರಾಜ್ಯದ ಪ್ರಮುಖ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ಶನಿವಾರ ನಡೆಯಿತು.
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ರಾಜ್ಯದ ಪ್ರಮುಖ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆ ಶನಿವಾರ ನಡೆಯಿತು.
ಪ್ರಸಕ್ತ ತಿಂಗಳಲ್ಲಿ ದೇವಾಲಯದ ಹುಂಡಿಯಲ್ಲಿಟೊಟ್ಟು 53,22,603 ರುಪಾಯಿ ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ 2 ಗ್ರಾಂ ಚಿನ್ನ ಹಾಗೂ ಒಂದೂವರೆ ಕೆಜಿ ತೂಕದ ಬೆಳ್ಳಿ ಆಭರಣಗಳನ್ನು ಭಕ್ತಾದಿಗಳು ಕಾಣಿಕೆ ಹುಂಡಿಯಲ್ಲಿ ಹಾಕಿದ್ದಾರೆ ಎಂದು ಕಾರ್ಯನಿರ್ವಹಣಾಧಿಕಾರಿ ಡಿ.ನಾಗರಾಜ್ ತಿಳಿಸಿದ್ದಾರೆ.ಭಕ್ತಾದಿಗಳ ಸಮ್ಮುಖದಲ್ಲಿ ನಡೆದ ಹುಂಡಿ ಹಣ ಎಣಿಕೆ ಕಾರ್ಯದ ವೇಳೆ ಮುಜರಾಯಿ ತಹಸೀಲ್ದಾರ್ ಜೆ.ಹೇಮಾವತಿ, ದೇವಾಲಯದ ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ನಂಜಪ್ಪ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಪೊಲೀಸ್ ಇಲಾಖೆ ಹಾಗೂ ದೇವಾಲಯ ನಿರ್ವಹಣಾ ಸಿಬ್ಬಂದಿ ಉಪಸ್ಥಿತರಿದ್ದರು..