ನಾವು ಭಾರತೀಯರು ಎಂಬ ಐಕ್ಯತೆ ಇರಬೇಕು

| Published : Aug 19 2025, 01:00 AM IST

ಸಾರಾಂಶ

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ, ಸಂಭ್ರಮ, ಸಡಗರದಿಂದ, ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಸುದೀರ್ಘ ಹೋರಾಟ, ತ್ಯಾಗ, ಬಲಿದಾನ ಮಾಡಿದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ನಾವು ಯಾವುದೇ ಜಾತಿ, ಧರ್ಮ, ಭಾಷೆಗೆ ಸೇರಿದ್ದರೂ ಕೂಡ ನಾವು ಮೊದಲು ಭಾರತೀಯರು ಎಂಬ ಐಕ್ಯತೆಯನ್ನು ಎತ್ತಿ ಹಿಡಿಯಬೇಕು ಎಂದು ಮಿಳಿಂದ ಸಂಸ್ಥೆಯ ಧರ್ಮದರ್ಶಿ ಹಾಗೂ ವಕೀಲ ಆರ್. ಲಕ್ಷ್ಮಣ್ ಕಿವಿಮಾತು ಹೇಳಿದರು.ತಾಲೂಕಿನ ಕೊಪ್ಪ ಬಳಿಯ ಗಿರಿಗೂರಿನ ಮಿಳಿಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ, ಸಂಭ್ರಮ, ಸಡಗರದಿಂದ, ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹಾತ್ಮಗಾಂಧಿಜೀ ನೇತೃತ್ವಲ್ಲಿ ಹಲವು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವಾಗಿದೆ ಎಂದರು.ಪ್ರತಿಯೊಬ್ಬ ಪ್ರಜೆಯು ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸಿ, ಪಾಲಿಸಿ ದೇಶಭಕ್ತಿ ಹೊಂದಬೇಕು. ರಾಷ್ಟ್ರನಾಯಕರ ಆದರ್ಶ, ವಿಚಾರಗಳು, ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಭವಿಷ್ಯ ರೂಪಿಸಿಕೊಳ್ಳಬೇಕು. ಭಾರತ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ವಿಭಿನ್ನ ದೇಶ ಎಂದು ಅವರು ತಿಳಿಸಿದರು.ತೆನ್‌ಜಿನ್‌ಶೋಯಾಂಗ್‌ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆ ವಿದ್ಯಾರ್ಥಿಗಳು ಮಾರ್ಚ್‌ ಫಾಸ್ಟ್‌ ಮಾಡಿದರು. ನಿರ್ದಿಗಂತ ಸಂಸ್ಥೆಯ ಸಂಯೋಜಕ ರವಿ ಅಥರ್ವ ಅವರು ಮಹಾತ್ಮ ಗಾಂಧಿಜೀಯವರ ಜೀವನ ಕುರಿತ ‘‘ನನ್ನ ಗಾಂಧಿ’’ ಎಂಬ ಕಿರು ನಾಟಕವನ್ನು ನಿರ್ದೇಶಿಸಿ ವಿದ್ಯಾರ್ಥಿಗಳಿಂದ ಪ್ರದರ್ಶಿಸಿದರು. ಸಂವಿಧಾನ ಪೀಠಿಕೆ ಮತ್ತು ವಿವಿಧ ಪ್ರಕಾರದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಂಡಿತು.ವಿದ್ಯಾರ್ಥಿಗಳಿಗೆ ಸಿಹಿ ಹಾಗೂ ಉಪಹಾರದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಮಿಳಿಂದ ವಿದ್ಯಾಸಂಸ್ಥೆ ಅಧ್ಯಕ್ಷ ಪ್ರೊ.ಎಚ್. ಗೋವಿಂದಯ್ಯ, ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಎ.ಬಿ. ಜಾನ್ಸಿ, ಎಂ.ಆರ್‌. ಗೀತಾ ಮತ್ತು ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.------------------eom/mys/dnm/