ಮಲಗಿದ್ದಾಗ ಹಾವು ಕಡಿತ; ಬಾಲಕಿ ಸಾವು

| Published : Jul 20 2025, 01:15 AM IST

ಸಾರಾಂಶ

ತಾಲೂಕಿನ ಹೊನ್ನಟಗಿ ಗ್ರಾಮದ ಮನೆಯಲ್ಲಿ ಮಲಗಿದ್ದಾಗ ಹಾವು ಕಡಿತದಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ದೇವದುರ್ಗ: ತಾಲೂಕಿನ ಹೊನ್ನಟಗಿ ಗ್ರಾಮದ ಮನೆಯಲ್ಲಿ ಮಲಗಿದ್ದಾಗ ಹಾವು ಕಡಿತದಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಿರಿಯಮ್ಮ ರಮೇಶ್ (4) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಮಲಗಿದಾಗ ಹಾವು ಕಚ್ಚಿದೆ ತಕ್ಷಣವೇ ಪೋಷಕರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ಹಾವು ಕಡಿತದಿಂದ ಬಾಲಕಿಯು ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.