ಸಾರಾಂಶ
ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.ತಾಲೂಕಿನ ಹೊನಗಾ ಗ್ರಾಮದ ಪ್ರಣಾಲಿ ಪರಶುರಾಮ ಉಂದ್ರೆ ( 14) ಮೃತ ಬಾಲಕಿ. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸೆರೆಳೆದಿದ್ದಾಳೆ. ಬಾಲಕಿ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.