ಹೆಣ್ಣು ಮಕ್ಕಳು ಕಡ್ಡಾಯ ಶಿಕ್ಷಣ ಪಡೆಯಿರಿ; ರಾಣಿ ಮಾಚಯ್ಯ

| Published : Jan 31 2024, 02:16 AM IST

ಸಾರಾಂಶ

ಮಡಿಕೇರಿ ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಯಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ ಆಯುಕ್ತ ರಾಣಿ ಮಾಚಯ್ಯ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ 2023-24 ಸಾಲಿನ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಪ್ರಯುಕ್ತ ನಗರದ ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಯಿತು.

ಸ್ಕೌಟ್ ಗೈಡ್ ಭವನ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ ಆಯುಕ್ತ ರಾಣಿ ಮಾಚಯ್ಯ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ಹೆಚ್ಚಾಗಿ ವಿದ್ಯಾವಂತರಾಗಬೇಕು ಎಂದು ಕಿವಿಮಾತು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕ ಸದಾಶಿವಯ್ಯ ಪಲ್ಲೆದ್ ಮಾತನಾಡಿ, ಹೆಣ್ಣು ಮಕ್ಕಳು ವಿದ್ಯಾವಂತರಾಗಿ ಧೈರ್ಯವಂತರಾಗಿ ಇದ್ದರೆ ಒಂದು ಸಮಾಜವು ಉನ್ನತ ಮಟ್ಟಕ್ಕೆ ಹೋಗಲು ಯಾವುದೇ ಸಂಶಯವಿಲ್ಲ ಎಂದರು.ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಮಾತನಾಡಿ, ಈಗ ಹೆಣ್ಣು ಮಕ್ಕಳು ಎಲ್ಲಾ ಉನ್ನತ ಹುದ್ದೆ ಹೊಂದಿ ಅಧಿಕಾರ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ನಮಿತಾ ರಾವ್ ಮಾತನಾಡಿ, ಮಕ್ಕಳ ಕಲ್ಯಾಣ ಸಮಿತಿಯು ನಿರ್ವಹಿಸುವ ಕಾರ್ಯಗಳ ಬಗ್ಗೆ ಎಂದು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಮಾತನಾಡಿ, ಹೆಣ್ಣು ಮಕ್ಕಳಿಗೆ ಸರ್ಕಾರ ಈಗ ಬಹಳಷ್ಟು ಸೌಲಭ್ಯ ಒದಗಿಸುತ್ತಿದೆ. ಇಲಾಖೆಯಿಂದ ಸಿಗುವ ಪ್ರಯೋಜನಗಳನ್ನು ಮಕ್ಕಳು/ ವಿದ್ಯಾರ್ಥಿ ಪಡೆದುಕೊಳ್ಳಬೇಕು. ಪೌಷ್ಟಿಕತೆಯಿಂದ, ಬೆಳವಣಿಗೆಯಾಗಬೇಕು ಅದರಲ್ಲೂ ಮಾನಸಿಕ, ಭೌತಿಕ, ದೈಹಿಕವಾಗಿ ಆರೋಗ್ಯದ ಬೆಳವಣಿಗೆ ಆಗಬೇಕು ಎಂದರು.

ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ವೇದಿಕೆಯಲ್ಲಿ ಗೈಡ್ ವಿಭಾಗದ ಸಹ ಕಾರ್ಯದರ್ಶಿ ಹರಿಣಿ ವಿಜಯ, ಗೈಡ್ ವಿಭಾಗದ ಮಾಜಿ ತರಬೇತಿದಾರರಾದ ಸಗಾಯ ಮೇರಿ, ನಗರದ ವಿವಿಧ ಶಾಲೆಗಳಿಂದ ಆಗಮಿಸಿದ ಗೈಡ್ ವಿದ್ಯಾರ್ಥಿನಿಯರು ಶಿಕ್ಷಕರು ಶಿಕ್ಷಕಿಯರು ಭಾಗವಹಿಸಿದ್ದರು.

ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ ಸ್ವಾಗತಿಸಿದರು. ಗೈಡ್ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಸುಲೋಚನಾ ವಂದಿಸಿದರು. ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕ ದಮಯಂತಿ ನಿರೂಪಿಸಿದರು.