ಮಹಿಳೆಯರಿಗೆ ಎಲ್ಲಾ ರಂಗದಲ್ಲಿ ಸಮಾನ ಆದ್ಯತೆ ನೀಡಬೇಕು, ಆಗಮಾತ್ರ ದೇಶದಲ್ಲಿ ಪರಿವರ್ತನೆ ಸಾಧ್ಯ. ದೇಶ ಕಟ್ಟುವಲ್ಲಿ ಹೆಣ್ಣುಮಕ್ಕಳ ಪಾತ್ರ ಅತೀ ದೊಡ್ಡದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ
ಮಹಿಳೆಯರಿಗೆ ಎಲ್ಲಾ ರಂಗದಲ್ಲಿ ಸಮಾನ ಆದ್ಯತೆ ನೀಡಬೇಕು, ಆಗಮಾತ್ರ ದೇಶದಲ್ಲಿ ಪರಿವರ್ತನೆ ಸಾಧ್ಯ. ದೇಶ ಕಟ್ಟುವಲ್ಲಿ ಹೆಣ್ಣುಮಕ್ಕಳ ಪಾತ್ರ ಅತೀ ದೊಡ್ಡದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.ಅವರು ನಗರದ ಕುಂಚ ಶ್ರೀ ಪ್ಯಾಲೇಸ್ ನಲ್ಲಿ ಮಾತೆ ಸಾವಿತ್ರಿ ಬಾಯಿ ಸಂಘದಿಂದ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ರವರ ಜನ್ಮ ಜಯಂತಿ ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳು ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು, ಇದರೊಂದಿಗೆ ಸಮಾಜದಲ್ಲಿನ ಮೌಢ್ಯತೆ ತೊಡೆದು ಹಾಕುವ ನಿಟ್ಟಿನಲ್ಲಿ ಯೋಚಿಸಬೇಕು ಎಂದ ಅವರು ಇದೇ ಸಂದರ್ಭದಲ್ಲಿ ತಾಲೂಕಿನ ಸಾವಿತ್ರಿ ಬಾಯಿ ಫುಲೆ ಸಂಘಕ್ಕೆ ಸರ್ಕಾರದ ವತಿಯಿಂದ ಒಂದು ಎಕರೆ ಜಮೀನು ಮಂಜೂರು ಮಾಡಿಕೊಡುವ ಭರವಸೆ ನೀಡಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರಾಧಮ್ಮ ಮಾತನಾಡಿ, ಸಂಘ ಒಂದು ಶಕ್ತಿ, ಇಂದು ರಾಷ್ಟ್ರದಾದ್ಯಂತ ನಮ್ಮ ಸಂಘಟನೆ ಇದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಘಟಕದ ಅಧ್ಯಕ್ಷೆ ಜಗದಾಂಬ ಸಾವಿತ್ರಿ ಬಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ಗೌರವಾಧ್ಯಕ್ಷೆ ಎಸ್.ಜಿ.ಮಂಜುಳ, ಕಾರ್ಯದರ್ಶಿ ಸಿ.ಕೆ.ಅರ್ಪಣಾ, ಗೌರವ ಸಲಹೆಗಾರರಾದ ವೆಂಕಟಲಕ್ಷ್ಮಮ್ಮ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಹನುಮಂತರಾಜು, ನೌಕರರ ಸಂಘದ ಕಾರ್ಯದರ್ಶಿ ದೇವರಾಜು, ಹನುಮಂತರಾಜು, ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ನಾಗರಾಜು,ಮುಕುಂದಪ್ಪ, ರಂಗನಾಥ್, ಸಾವಿತ್ರಿ ಬಾಯಿ ಫುಲೆ ಘಟಕದ ಲತಾಮಣಿ, ಚಂದ್ರಕಲಾ, ಶಬನಾ, ಪ್ರೇಮಲೀಲಾ, ಸುಜಾತ, ಸೌಭಾಗ್ಯ, ಮಮತ, ಕುಬ್ರಾ ಬಾನು, ಶೃತಿ ಸೇರಿದಂತೆ ಹಲವರು ಹಾಜರಿದ್ದರು.