ಹೆಣ್ಣು ಭ್ರೂಣ ಹತ್ಯೆಯಂತಹ ಕೃತ್ಯಗಳಿಗೆ ಕೈಹಾಕಬಾರದು. ಅದು ಕಾನೂನು ಬಾಹಿರ. ಸ್ತ್ರೀ ಪುರುಷರ ಅನುಪಾತ ಸಮನವಾಗಿರುವಂತೆ ನೋಡಿಕೊಳ್ಳಬೇಕು. ತಾಯಿ, ಹೆಂಡತಿ, ಮಗಳಾಗಿ ಎಲ್ಲರ ಜೀವನದಲ್ಲಿ ಮಹತ್ತರ ಪಾತ್ರ ನಿಭಾಯಿಸು ಹೆಣ್ಣು ಮಕ್ಕಳ ಪ್ರತಿಭೆ ಗುರುತಿಸಿ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಬೇಕು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಹೆಣ್ಣು ಮಗು ಎದು ಕೀಳಾಗಿ ಕಾಣದೆ ಅವರನ್ನು ಬೆಳೆಸಿ, ಓದಿಸಿ, ಪ್ರೋತ್ಸಾಹಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ ಹೇಳಿದರು.ಪಟ್ಟಣದ ರಂಗನಾಥ ನಗರದ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿ, ಇತ್ತೀಚೆಗೆ ಹೆಣ್ಣಿನ ಸಂಖ್ಯೆ ಕಡಿಮೆಯಾಗುತ್ತಿದೆ. ಜೊತೆಗೆ ಅವರ ಮೇಲೆ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಹೆಣ್ಣು ಭ್ರೂಣ ಹತ್ಯೆಯಂತಹ ಕೃತ್ಯಗಳಿಗೆ ಕೈಹಾಕಬಾರದು. ಅದು ಕಾನೂನು ಬಾಹಿರ. ಸ್ತ್ರೀ ಪುರುಷರ ಅನುಪಾತ ಸಮನವಾಗಿರುವಂತೆ ನೋಡಿಕೊಳ್ಳಬೇಕು. ತಾಯಿ, ಹೆಂಡತಿ, ಮಗಳಾಗಿ ಎಲ್ಲರ ಜೀವನದಲ್ಲಿ ಮಹತ್ತರ ಪಾತ್ರ ನಿಭಾಯಿಸು ಹೆಣ್ಣು ಮಕ್ಕಳ ಪ್ರತಿಭೆ ಗುರುತಿಸಿ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ತಿಳಿಸಿದರು.ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ.ಮಂಗಳ ಮಾತನಾಡಿ, ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ ಮಾಡಬೇಡಿ. 18 ವರ್ಷ ತುಂಬಿದ ನಂತರ ಮದುವೆ ವಿಚಾರ ಮಾಡಿ. ಹೆಣ್ಣು ಮಕ್ಕಳಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಾಯಂದಿರಿಗೆ ಸಲಹೆ ನೀಡಿದರು.
ಈ ವೇಳೆ ಅಂಗನವಾಡಿ ಕಾರ್ಯಕರ್ತೆ ರೇಷ್ಮಾ, ಕೆ ಸುಜಾತ, ಆರೋಗ್ಯ ನಿರೀಕ್ಷಣಾಧಿಕಾರಿ ಮೇಘನಾ ತಾಯಂದಿರಾದ ಮಹದೇವಮ್ಮ, ದೀಪಿಕಾ, ರಶ್ಮಿ, ಚಂದನಾ, ಕಾವ್ಯ ಸೇರಿದಂತೆ ಇತರರು ಇದ್ದರು.ಉಚಿತ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ
ಶ್ರೀರಂಗಪಟ್ಟಣ:ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎಂ.ಶ್ರೀಧರ್ ನೇತೃತ್ವದಲ್ಲಿ ಉಚಿತ ಉದರ ದರ್ಶಕ ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಸ್ಪತ್ರೆ ಸುಸಜ್ಜಿತ ಸಲಕರಣೆಗಳೊಂದಿಗೆ ಯಶಸ್ವಿಯಾಗಿ ನಡೆಸಲಾಯಿತು.
ಪ್ರತಿ ತಿಂಗಳು ಎರಡು ಬಾರಿ ಮಹಿಳಾ ಸಂತಾನ ನಿರೋಧಕ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ. ತಾಲೂಕಿನ ಎಲ್ಲಾ ಅರ್ಹ ಮಹಿಳೆಯರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಎಂ.ಶ್ರೀಧರ್ ಹೇಳಿದರು.ಶಿಬಿರದಲ್ಲಿ ಶಸ್ತ್ರಚಿಕಿತ್ಸಾ ತಜ್ಞ ವೈದ್ಯ ಡಾ.ಶ್ರೀನಿವಾಸ್, ಅರವಳಿಕೆ ತಜ್ಞ ವೈದ್ಯ ಡಾ.ರಾಜು ಹಾಗೂ ಶುಶ್ರೂಷಣಾಧಿಕಾರಿ ಪದ್ಮ, ಕವಿತಾ, ಸೌಮ್ಯ, ಅಂಬಿಕಾ ಹಾಗೂ ಸಿಬ್ಬಂದಿ ಅಭಿಲಾಷ, ಪಲ್ಲವಿ, ಶಶಿ ಹಾಗೂ ಇತರರು ಕರ್ತವ್ಯ ನಿರ್ವಹಿಸಿದರು.