ಹೆಣ್ಣು ಮಕ್ಕಳು ಕೀಳರಿಮೆ ಅಳಿಸಿ ಸಾಧನೆ ಮಾಡಬೇಕು: ಜಯರಾಮ್ ನೆಲ್ಲಿತ್ತಾಯ

| Published : Dec 13 2024, 12:50 AM IST

ಹೆಣ್ಣು ಮಕ್ಕಳು ಕೀಳರಿಮೆ ಅಳಿಸಿ ಸಾಧನೆ ಮಾಡಬೇಕು: ಜಯರಾಮ್ ನೆಲ್ಲಿತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ತಾಯಿ, ಸಹೋದರಿ, ಮಗಳಾಗಿ ಇಡೀ ಕುಟುಂಬವನ್ನು ಮುನ್ನಡೆಸುತ್ತಿರುವ ಹೆಣ್ಣು ಮಕ್ಕಳ ಮೇಲೆ ಪುರುಷ ಪ್ರಧಾನ ಸಮಾಜದಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಅನ್ಯಾಯ ಅಕ್ರಮ ಹಾಗೂ ಶೋಷಣೆ ವಿರುದ್ಧ ಹೆಣ್ಣು ಮಕ್ಕಳು ಹೋರಾಟ ನಡೆಸಬೇಕು. ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಸಿಡಿದೇಳಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಹೆಣ್ಣು ಮಕ್ಕಳು ತಮ್ಮಲ್ಲಿನ ಕೀಳರಿಮೆ ಅಳಿಸಿ ಹಾಕಿ ಸ್ವಾಭಿಮಾನಿಗಳಾಗಿ ತಮ್ಮಲ್ಲಿ ಸುಪ್ತವಾಗಿರುವ ವೃತ್ತಿ ಕೌಶಲ್ಯದ ಮೂಲಕ ಸಾಧನೆಯೊಂದಿಗೆ ಸಬಲೀಕರಣ ಮಾಡಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯರಾಮ್ ನೆಲ್ಲಿತ್ತಾಯ ಹೇಳಿದರು.

ತಾಲೂಕಿನ ಕೈಗೋನಹಳ್ಳಿ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಮಹಿಳಾ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಮಕ್ಕಳು ನಮ್ಮ ರಾಷ್ಟ್ರ ದಶಕ್ತಿ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಹಿರಿಯರ ನಾಣ್ಣುಡಿಯಂತೆ ಸಮಾಜದಲ್ಲಿ ಇಂದು ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡುತ್ತಾ ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸುತ್ತಿದ್ದಾರೆ ಎಂದರು.

ತಾಯಿ, ಸಹೋದರಿ, ಮಗಳಾಗಿ ಇಡೀ ಕುಟುಂಬವನ್ನು ಮುನ್ನಡೆಸುತ್ತಿರುವ ಹೆಣ್ಣು ಮಕ್ಕಳ ಮೇಲೆ ಪುರುಷ ಪ್ರಧಾನ ಸಮಾಜದಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಅನ್ಯಾಯ ಅಕ್ರಮ ಹಾಗೂ ಶೋಷಣೆ ವಿರುದ್ಧ ಹೆಣ್ಣು ಮಕ್ಕಳು ಹೋರಾಟ ನಡೆಸಬೇಕು. ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಸಿಡಿದೇಳಬೇಕು ಎಂದು ಕರೆ ನೀಡಿದರು.

ಈ ವೇಳೆ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ತಾಲೂಕು ಯೋಜನಾಧಿಕಾರಿ ವೀರೇಶಪ್ಪ, ಮಹಿಳಾ ಮಕ್ಕಳ ಇಲಾಖೆಯ ಅಧಿಕಾರಿ ಪದ್ಮಾ, ಉಪನ್ಯಾಸಕಿ ಸಾವಿತ್ರಿ, ತಾಲೂಕಿನ ಬೆಡದಹಳ್ಳಿ ಪಂಚಭೂತೇಶ್ವರ ಮಠದ ಪೀಠಾಧಿಪತಿ ಶ್ರೀರುದ್ರಮುನಿಸ್ವಾಮೀಜಿ ಭಾಗವಹಿಸಿದ್ದರು.

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ ಆರೋಪ

ಮಂಡ್ಯ:

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗು ಸಂಬಂಧಿತ ಇಲಾಖೆಗಳು ವಿಫಲರಾಗಿದ್ದಾರೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್ ರಾಜ್ಯಾಧ್ಯಕ್ಷ ಹೆಚ್.ಜಿ.ಗಂಗರಾಜು ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಪತ್ತೆ ಹಚ್ಚುವ ನಮ್ಮ ತಂಡ ನಾಗಮಂಗಲ ತಾಲೂಕಿಗೆ ತೆರಳಿದ್ದು, ಸಂಕನಹಳ್ಳಿ ಎಲ್ಲೆಯಲ್ಲಿ, ಬಂಕಾಪುರ ಎಲ್ಲೆ, ಹೆಚ್ಚಲಘಟ್ಟ, ದೇವನೊಸೂರು ಗ್ರಾಮಗಳಲಿ ಎಗ್ಗಿಲ್ಲದೇ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಪತ್ತೆಯಾಗಿದೆ ಎಂದರು.

ಈ ಸಂಬಂಧ ಮೌಕಿಕವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದ ಕಾರಣ ಲಿಖಿತ ರೂಪದಲ್ಲಿಯೂ ದೂರು ನೀಡಲಾಯಿತು. ಆದರೂ ಯಾವುದೇ ಕ್ರಮವಾಗಿಲ್ಲ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಅಕ್ರಮ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ. ಅಕ್ಕಪಕ್ಕದ ಗ್ರಾಮಗಳಲ್ಲಿ ಮನೆಗಳು ಬಿರುಕು ಬಿಡುತ್ತಿವೆ. ಜನರ ಅನಾರೋಗ್ಯ ಸಮಸ್ಯೆಗಳು ತಲೆದೋರುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವರ ತವರು ಜಿಲ್ಲೆಯಲ್ಲೇ ಅತಿಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ವಿಷಾದಿಸಿದರು.

ಭಾರತೀಯ ಬುದ್ಧ ಫೌಂಡೇಷನ್‌ನ ಜೆ.ರಾಮಯ್ಯ ಮಾತನಾಡಿ, ಅಕ್ರಮ ಗಣಿಗಾರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಮಾಜಿ ಶಾಸಕರು ಹಾಗೂ ಮಾಜಿ ಸಚಿವರು ಹಾಗೂ ಅವರ ಸಹಚರರು ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸ್ವಾಭಿಮಾನಿ ಸಮಸಮಾಜದ ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ, ಅಹಿಂದ ರಾಜ್ಯ ಸಂಚಾಲಕ ಲೋಕೇಶ್, ಗ್ರಾಪಂ ಮಾಜಿ ಸದಸ್ಯ ಕೆ.ಸಿ.ವೇಣುಗೋಪಾಲ್, ಸಂವಿಧಾನ ಬಳಗದ ಮುಖಂಡ ಅನಿಲ್‌ಕುಮಾರ್, ಮಹೇಶ್, ಅಭಿಗೌಡ, ಅಮ್ಜದ್ ಪಾಷ ಇದ್ದರು.