ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ಅವರು ಮಾ.20 ರಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಖಂಡರ ಜೊತೆ ಚುನಾವಣಾ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಮಾ.20ರಂದು ಗೀತಾ ಶಿವಮೊಗ್ಗಕ್ಕೆ ಆಗಮಿಸಿ ಪ್ರಚಾರ ಶುರು ಮಾಡಲಿದ್ದಾರೆ. ಅಂದು ನಟ ಹಾಗೂ ಪತಿ ಶಿವರಾಜ್‌ಕುಮಾರ್ ಕೂಡ ಆಗಮಿಸಲಿದ್ದಾರೆ. ಇದಕ್ಕೂ ಮುನ್ನಾ ಮಾ.17ರಂದು ಪೂರ್ವಭಾವಿ ಸಭೆ ಆಯೋಜಿಸಿದ್ದು, ಮಾ.20ರಿಂದ ಚುನಾವಣೆ ಪ್ರಚಾರ ಆರಂಭಿಸುತ್ತೇವೆ. ಆ ಮೇಲೆ ನಿರಂತರ ಚುನಾವಣೆ ಪ್ರಚಾರ ಪ್ರಕ್ರಿಯೆ ನಡೆಯುತ್ತವೆ ಎಂದು ತಿಳಿಸಿದರು.
ಗ್ಯಾರಂಟಿ ವಿಷಯಗಳ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಗ್ಯಾರಂಟಿ ಯೋಜನೆ ತುಂಬಾ ಚೆನ್ನಾಗಿ ವರ್ಕೌಟ್ ಆಗಿದೆ. ವಿಶ್ವಾಸ ಬಂದಿದೆ. ಜನರು ಪಕ್ಷ ಹಾಗೂ ಸರ್ಕಾರದ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಗ್ಯಾರಂಟಿ ಮೇಲೆ ಜನರು ವಿಶ್ವಾಸವಿಟ್ಟು ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ಗ್ಯಾರಂಟಿ ನಮ್ಮನ್ನು ಗೆಲ್ಲಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಂಸದೆಯಾಗಿ ಗೀತಾ ಜನಸೇವೆ:
ಗೀತಾ ಶಿವರಾಜ್ ಕುಮಾರ್ ಬಹಳ ಆ್ಯಕ್ಟಿವ್ ಆಗಿ ಅವರ ಜವಾಬ್ದಾರಿ ನಿರ್ವಹಿಸುತ್ತಾರೆ. ಚುನಾವಣಾ ಫಲಿತಾಂಶದ ನಂತರ ಸಂಸದರಾಗಿ ಗೀತಾ ಶಿವರಾಜ್ ಕುಮಾರ್ ಅವರ ಜವಾಬ್ದಾರಿ ನಿರ್ವಹಿಸುತ್ತಾರೆ. ಜಿಲ್ಲೆಯ ಧ್ವನಿಯಾಗಿ ತುಂಬಾ ಚೆನ್ನಾಗಿ ಕೆಲಸ ಮಾಡುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.ಗೀತಾ ಶಿವರಾಜ್‌ಕುಮಾರ್ ಕ್ಷೇತ್ರಕ್ಕೆ ಬಂದಿಲ್ಲ ಎಂದು ಹೇಳುವ ಬಿಜೆಪಿಯವರು, ಇಲ್ಲಿಂದ ದುಡ್ಡು ತೆಗೆದುಕೊಂಡು ಹೋಗಿ ರಾಜ್ಯಕ್ಕೆ ಏನನ್ನೂ ಕೊಡದ ನಿರ್ಮಿಲಾ ಸೀತಾರಾಮನ್ ಅವರನ್ನು ಯಾಕೆ ಎಂದು ಕೇಳಲಿ. ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾಗ ರಾಘವೇಂದ್ರ ಅವರದು ಏನು ಕೊಡುಗೆ ಇತ್ತು? ಹಣ ಇತ್ತು ಅಷ್ಟೇ. ಹಾಗಾಗಿ, ಅದನ್ನು ಬಿಡಬೇಕು ಎಂದು ಕುಟುಕಿದರು.
- - -ಬಾಕ್ಸ್ 400 ಚುನಾವಣಾ ಸಭೆ: ಸಚಿವಗೀತಾ ಶಿವರಾಜ್ ಕುಮಾರ್ 400 ಚುನಾವಣಾ ಸಭೆಯಲ್ಲಿ ಭಾಗವಹಿಸುವರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಾಲೂಕು ಮಟ್ಟಕ್ಕೆ ಕರೆಯಿಸಬೇಕು ಅಂದುಕೊಂಡಿದ್ದೇವೆ. ಶಿವಣ್ಣ ಹೋಬಳಿ ಮಟ್ಟದಲ್ಲಿ ಪ್ರಚಾರ ಮಾಡಬೇಕು ಅಂದುಕೊಂಡಿದ್ದೇವೆ. ಪಕ್ಷ ಈಗಾಗಲೇ ತೀರ್ಮಾನ ಮಾಡಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಟಿಕೆಟ್ ಕೊಟ್ಟಿದೆ. ನಾವೆಲ್ಲ ಅವರ ಪರ ಕೆಲಸ ಮಾಡಿ ಅವರನ್ನು ಗೆಲ್ಲಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
- - - -15ಎಸ್‌ಎಂಜಿಕೆಪಿ02: ಮಧು ಬಂಗಾರಪ್ಪ