ಸಾರಾಂಶ
ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ಮೂಲಕ ಶಾಸಕ ಭರತ್ ಶೆಟ್ಟಿ ಅವರು ದೇಶದ ಕಾರ್ಯಕರ್ತರಿಗೆ ನೋವಾಗುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಪುತ್ತೂರು
ವಿದ್ಯಾವಂತರಾಗಿದ್ದು, ವೈದ್ಯಕೀಯ ಕಲಿತಿರುವ ಶಾಸಕ ಭರತ್ ಶೆಟ್ಟಿ ಅವರು ಇನ್ನೊಬ್ಬರಿಗೆ ಗೌರವ ಕೊಡುವುದನ್ನೂ ಕಲಿಯಲಿ. ನಾಲ್ಕು ಜನರು ಚಪ್ಪಾಳೆ ತಟ್ಟುತ್ತಾರೆ ಎಂದು ಏನೆಲ್ಲ ಮಾತನಾಡುವುದು ಸರಿಯಲ್ಲ. ಅಧಿಕಾರ ಇರುವಾಗ ಚಪ್ಪಾಳೆ ತಟ್ಟುವವರು ಇರುತ್ತಾರೆ. ಆದರೆ ಅಧಿಕಾರ ಕಳೆದುಕೊಂಡಾಗ ಯಾರೂ ಇರುವುದಿಲ್ಲ. ಅಧಿಕಾರದ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಶಾಸಕ ಭರತ್ ಶೆಟ್ಟಿ ಅವರು ಅವಹೇಳನಕಾರಿ ನಿಂದನೆ ಮಾಡಿರುವುದನ್ನು ಖಂಡಿಸಿ ಹಾಗೂ ಬಿಜೆಪಿ ಸುಳ್ಳಿನ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಶನಿವಾರ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ಮೂಲಕ ಶಾಸಕ ಭರತ್ ಶೆಟ್ಟಿ ಅವರು ದೇಶದ ಕಾರ್ಯಕರ್ತರಿಗೆ ನೋವಾಗುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಂ. ಎಸ್. ಮಹಮ್ಮದ್ ಮಾತನಾಡಿದರು. ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ, ಕರ್ನಾಟಕ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಎನ್. ಚಂದ್ರಹಾಸ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಕೂರ್ ಹಾಜಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಶಿಕಿರಣ್ ರೈ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ನಗರಸಭಾ ಸದಸ್ಯರಾದ ರಿಯಾಜ್ ಪರ್ಲಡ್ಕ, ದಿನೇಶ್ ಶೇವಿರೆ, ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು, ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ, ಪುಡಾ ಅಧ್ಯಕ್ಷ ಭಾಸ್ಕರ್ ಗೌಡ ಕೋಡಿಂಬಾಳ, ಸದಸ್ಯರಾದ ನಿಹಾಲ್ ಪಿ. ಶೆಟ್ಟಿ, ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೇನಸ್, ಬೊಳೋಡಿ ಚಂದ್ರಹಾಸ ರೈ, ಕೌಶಲ್ ಪ್ರಸಾದ್ ಶೆಟ್ಟಿ, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ಮತ್ತಿತರರಿದ್ದರು.