ಸಾರಾಂಶ
ಕನ್ನಡಪ್ರಭ ವರ್ತೆ ಚಾಮರಾಜನಗರಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ದಲಿತ ಕೋಟಾದಡಿ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕೆಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಆರ್.ಮಹದೇವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ನ್ನು ಅವರಲ್ಲಿ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿ.ರಾಚಯ್ಯನವರ ನಂತರ ಯಾವೊಬ್ಬ ದಲಿತ ಶಾಸಕರು ಸಚಿವರಾಗಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಗುರುಗಳಾದ ಬಿ.ರಾಚಯ್ಯನವರ ಪುತ್ರರಾಗಿರುವ ಹಾಗೂ ರಾಚ,ಯ್ಯನವರ ಪತ್ನಿ ಗೌರಮ್ಮನವರ ಆಸೆಯಂತೆ ಎ.ಆರ್. ಕೃಷ್ಣಮೂರ್ತಿ ಅವರನ್ನು ಸಚಿವರನ್ನಾಗಿ ನೇಮಿಸುವಂತೆ ಮನವಿ ಮಾಡಿದರು.ಸ್ಥಳೀಯರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾದರೆ ಜಿಲ್ಲೆಯ ಪ್ರಗತಿಯಾಗುತ್ತದೆ, ಜೊತೆಗೆ ಕೃಷ್ಣಮೂರ್ತಿ ಅನುಭವ ಉಳ್ಳವರಾಗಿದ್ದಾರೆ ಎಂದರು. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ, ಬಿ.ರಾಚಯ್ಯ ಜೋಡಿ ರಸ್ತೆ ಅಭಿವೃದ್ದಿ, ಸ್ವಾಗತ ಕಮಾನು ಮತ್ತು ಭುವನೇಶ್ವರಿ ವೃತ್ತದಲ್ಲಿ ಬಿ.ರಾಚಯ್ಯ ಅವರ ಪುತ್ಥಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ, ಈ ಸಚಿವ ಸಂಪುಟ ಸಭೆಯಲ್ಲೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಯಳಂದೂರು ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ಮುಖಂಡರಾದ ಜೆ. ಯೋಗೇಶ್, ಅಯ್ಯನಪುರ ಶಿವಕುಮಾರ್, ಸೋಮಣ್ಣ, ಶ್ರೀನಿವಾಸ್, ರೇವಣ್ಣ ಇದ್ದರು.