ಇತ್ತೀಚೆಗೆ ಮಕ್ಕಳು ಪುಸ್ತಕ ಓದುವುದನ್ನು ಬಿಟ್ಟು ಮೊಬೈಲ್ ನಲ್ಲಿ ವಾಟ್ಸ್ ಆ್ಯಪ್ ಹಾಗೂ ಫೇಸ್ ಬುಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರ ಜೀವನ ಮೊಬೈಲ್ ಮಯವಾಗುತ್ತಿದೆ. ಪೋಷಕರು ಮಕ್ಕಳಿಗೆ ಕೇವಲ ಮಳಿಗೆಗಳನ್ನು ತೋರಿಸುವುದಷ್ಟೇ ಅಲ್ಲದೆ, ಅವರ ಕೈಗಳಿಗೆ ಪುಸ್ತಕಗಳನ್ನು ನೀಡಿ ಓದುವ ಹವ್ಯಾಸ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಬೇಕು.
ಎಲ್.ಎಸ್. ಶ್ರೀಕಾಂತ್
ಕನ್ನಡಪ್ರಭ ವಾರ್ತೆ ಮೈಸೂರುಮಕ್ಕಳ ಕೈಗೆ ಪುಸ್ತಕ ನೀಡಿ ಓದಿಸಿ, ಮೊಬೈಲ್ ನೀಡಬೇಡಿ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.
ನಗರದ ಹಳೇ ಡಿಸಿ ಕಚೇರಿ ಹಿಂಭಾಗದ ಭಾರತ್ ಸ್ಕೌಟ್ಸ್ & ಗೈಡ್ಸ್ ಮೈದಾನಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಭಾನುವಾರ ಉದ್ಘಾಟಿಸಿದ ನಂತರ ಅವರು ಮಾತನಾಡಿದರು.ಇತ್ತೀಚೆಗೆ ಮಕ್ಕಳು ಪುಸ್ತಕ ಓದುವುದನ್ನು ಬಿಟ್ಟು ಮೊಬೈಲ್ ನಲ್ಲಿ ವಾಟ್ಸ್ ಆ್ಯಪ್ ಹಾಗೂ ಫೇಸ್ ಬುಕ್ ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರ ಜೀವನ ಮೊಬೈಲ್ ಮಯವಾಗುತ್ತಿದೆ. ಪೋಷಕರು ಮಕ್ಕಳಿಗೆ ಕೇವಲ ಮಳಿಗೆಗಳನ್ನು ತೋರಿಸುವುದಷ್ಟೇ ಅಲ್ಲದೆ, ಅವರ ಕೈಗಳಿಗೆ ಪುಸ್ತಕಗಳನ್ನು ನೀಡಿ ಓದುವ ಹವ್ಯಾಸ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಬೇಕು ಎಂದು ಅವರು ಕರೆ ನೀಡಿದರು.
95 ಪುಸ್ತಕ ಮಳಿಗೆಗಳ ನಿರ್ಮಾಣಕ್ಕೆ ಅವಕಾಶ:ಈ ಬಾರಿ ಪುಸ್ತಕ ಮೇಳಕ್ಕೆ ಸುಮಾರು 140 ಅರ್ಜಿಗಳು ಬಂದಿದ್ದು, 95 ಮಳಿಗೆಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರಕಾಶಕರು ಆಗಮಿಸಿದ್ದಾರೆ, ಪ್ರತಿವರ್ಷ 9 ದಿನಗಳ ಕಾಲ ನಡೆಯುತ್ತಿದ್ದ ಈ ಮೇಳವನ್ನು ಈ ಬಾರಿ ಸಾರ್ವಜನಿಕರ ಅನುಕೂಲಕ್ಕಾಗಿ 11 ದಿನಗಳ ಕಾಲ ಅ. 11 ರಿಂದ 21 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಮಳಿಗೆಯವರಿಗೆ ಊಟ, ಉಪಹಾರದ ವ್ಯವಸ್ಥೆ:ದಸರಾ ಪ್ರಕಾಶಕರು ಮತ್ತು ಮಳಿಗೆಯವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪ್ರತಿದಿನ ಬಿಸಿ ಊಟ ಮತ್ತು ಉಪಹಾರವನ್ನು ಉಚಿತವಾಗಿ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅವರು ರೂಪಿಸಿರುವ ‘ಮನೆಗೊಂದು ಗ್ರಂಥಾಲಯ’ಎಂಬ ವಿಶಿಷ್ಟ ಯೋಜನೆಯನ್ನು ಸಚಿವರು ಶ್ಲಾಘಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್. ಮಂಜುಶ್ರೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯತ್ರಿ, ಕುವೆಂಪು ಕನ್ನಡ ಸಂಸ್ಥೆಯ ನಿರ್ದೇಶಕ ಪ್ರೊ.ಎಂ. ನಂಜಯ್ಯ ಹೊಂಗನೂರು, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಮಾನಸ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ್, ಇತರರು ಇದ್ದರು.
ಚಾಮುಂಡೇಶ್ವರಿಗೆ ಸಿಎಂ ವಿಶೇಷ ಪೂಜೆ: ಸಾಷ್ಟಾಂಗ ನಮಸ್ಕಾರಕನ್ನಡಪ್ರಭ ವಾರ್ತೆ ಮೈಸೂರು
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಹಬ್ಬ ದಸರಾ ಉದ್ಘಾಟನೆಗೂ ಮುನ್ನ ಪತ್ನಿ ಉಷಾ ಹಾಗೂ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಅವರೊಂದಿಗೆ ಚಾಮುಂಡಿಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಹಾಗೂ ಜನರ ಒಳಿತಿಗೆ ಪ್ರಾರ್ಥಿಸಿದರು.ಪೂಜೆ ಬಳಿಕ ಹೊರ ಬಂದ ಡಿ.ಕೆ. ಶಿವಕುಮಾರ್ ಅವರು ಚಾಮುಂಡೇಶ್ವರಿ ದೇವಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ದೇವಸ್ಥಾನದ ಗರ್ಭಗುಡಿಯನ್ನು ಒಂದು ಪ್ರದಕ್ಷಿಣೆ ಹಾಕಿದರು. ನಂತರ ದೇವಸ್ಥಾನದ ಹೊರ ಬರುತ್ತಿದ್ದಂತೆ ಈಡುಗಾಯಿ ಒಡೆದರು.ಈ ವೇಳೆ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಇತರೆ ಸಚಿವರು, ಶಾಸಕರು ಇದ್ದರು.ಜಿಲ್ಲಾಡಳಿತದಿಂದ ಸ್ವಾಗತ:
ದಸರಾ ಮಹೋತ್ಸವ ಉದ್ಘಾಟನೆಗೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ, ಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಚಿವರನ್ನು ಮತ್ತು ಶಾಸಕರನ್ನು ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.ನಂದಿಕಂಬಕ್ಕೆ ಪೂಜೆ ಸಲ್ಲಿಸಿ ಮಂಗಳವಾದ್ಯಗಳ ಮೂಲಕ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು. ವೀರಗಾಸೆ, ಪೂಜಾ ಕುಣಿತ, ಚಂಡೆ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.