ಶಿವಮೊಗ್ಗ: ರಾಜ್ಯದ ಏಕೈಕ ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಭದ್ರಾವತಿ ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಎಚ್.ತಿಮ್ಮಯ್ಯ ಆಗ್ರಹಿಸಿದರು.
ರಾಜ್ಯದಲ್ಲಿ ಉಪ್ಪಾರ ಸಮಾಜವು ಸುಮಾರು 28 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಚಾಮರಾಜನಗರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿ ಅವರು ಸಚಿವರಾಗಿ ಹಾಗೂ ನಿಗಮ ಮಂಡಳಿಯ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.ಪುಟ್ಟರಂಗಶೆಟ್ಟಿ ಅವರನ್ನು ಸಚಿವರನ್ನಾಗಿ ಮಾಡಿ ಅತ್ಯಂತ ಹಿಂದುಳಿದ ಸಮಾಜದ ಏಳಿಗೆಗೆ ಸೇವೆ ಸಲ್ಲಿಸಲು ಅನುವು ಮಾಡಿಕೊಂಡಬೇಕೆಂದು ಸಮಾಜ ಬಾಂಧವರ ಪರವಾಗಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವವಕುಮಾರ್ ಅವರಿಗೆ ಸಮಾಜದ ಪರವಾಗಿ ಅಭಿನಂದಿಸುತ್ತೇವೆ. ಉಪ್ಪಾರ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸಬೇಕು. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಬಿ.ಎಚ್.ಪ್ರಕಾಶ್, ಸಹ ಕಾರ್ಯದರ್ಶಿ ಕೆ.ಮಂಜುನಾಥ್, ಖಜಾಂಚಿ ಬಿ.ಆರ್. ಶ್ರೀನಿವಾಸ್, ನಿರ್ದೇಶಕರಾದ ಕೆ.ನಾಗರಾಜ್, ರವೀಶ್, ದೇವರಾಜ್ ಉಪಸ್ಥಿತರಿದ್ದರು.