ಕಾಡುಗೊಲ್ಲರಿಗೂ ಪರಿಷತ್‌ ಸ್ಥಾನ ನೀಡಿ: ಪಿ.ರಾಮಪ್ಪ ಒತ್ತಾಯ

| Published : May 29 2024, 12:50 AM IST

ಕಾಡುಗೊಲ್ಲರಿಗೂ ಪರಿಷತ್‌ ಸ್ಥಾನ ನೀಡಿ: ಪಿ.ರಾಮಪ್ಪ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಅತ್ಯಂತ ಹಿಂದುಳಿದಿರುವ ಬುಡಕಟ್ಟು ಸಮುದಾಯವಾದ ಕಾಡುಗೊಲ್ಲರಿಗೆ ಈ ಬಾರಿ ವಿಧಾನ ಪರಿಷತ್‌ ಸ್ಥಾನ ಲಭಿಸಲಿ ಎಂದು ಸಮಾಜದ ತಾಲೂಕು ಘಟಕದ ಗೌರವಾಧ್ಯಕ್ಷ ಪಿ.ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಸದುರ್ಗ

ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಬುಡಕಟ್ಟು ಸಮಾಜವಾದ ಕಾಡುಗೊಲ್ಲ ಸಮಾಜಕ್ಕೆ ವಿಧಾನ ಪರಿಷತ್ತಿನಲ್ಲಿ ಒಂದು ಸ್ಥಾನವನ್ನು ನೀಡಬೇಕು ಎಂದು ಕಾಡುಗೊಲ್ಲ ಸಮಾಜದ ತಾಲೂಕು ಘಟಕದ ಗೌರವಾಧ್ಯಕ್ಷ ಪಿ.ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ,ಅತ್ಯಂತ ಹಿಂದುಳಿದಿರುವ ಬುಡಕಟ್ಟು ಸಮುದಾಯವಾದ ಕಾಡುಗೊಲ್ಲ ಸಮಾಜವು ಚಿತ್ರದುರ್ಗ ತುಮಕೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಹರಿದು ಹಂಚಿಹೋಗಿದ್ದು ಅದನ್ನು ಒಗ್ಗೂಡಿಸಲು ನೈತಿಕ ಶಕ್ತಿ ತುಂಬಲು, ಸಾಮಾಜಿಕ ನ್ಯಾಯ ದೊರಕಿಸಿಕೊಳ್ಳಲು ರಾಜಕೀಯ ಸ್ಥಾನಮಾನ ಅಗತ್ಯವಾಗಿದೆ. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಸದಾಕಾಲ ಬೆಂಬಲಿಸಿಕೊಂಡು ಬಂದಿರುವ ಕಾಡುಗೊಲ್ಲ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆ ಮಾಡಬಹುದಾದ ಏಳು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಾಡುಗೊಲ್ಲ ಸಮುದಾಯಕ್ಕೆ ನೀಡಬೇಕೆಂದು ಸರ್ಕಾರವನ್ನು ಈ ಮೂಲಕ ಒತಾಯಿಸುವುದಾಗಿ ತಿಳಿಸಿದರು.

ತಾಲೂಕು ಅಧ್ಯಕ್ಷ ಟಿ ರವೀಂದ್ರ ಮಾತನಾಡಿ, ರಾಜ್ಯದಲ್ಲಿ ಕಾಡುಗೊಲ್ಲ ಸಮಾಜ ಅತಿ ಹೆಚ್ಚು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಗಿದೆ. ಅತ್ಯಂತ ಹಿಂದುಳಿದ ಸಮಾಜವಾದ ಕಾಡುಗಳ ಸಮಾಜದ ಯಾವೊಬ್ಬ ಪ್ರತಿನಿಧಿಯೂ ವಿಧಾನಸಭೆಯಲ್ಲಾಗಲಿ ವಿಧಾನ ಪರಿಷತ್ತಿನಲ್ಲಾಗಲಿ ಇರುವುದಿಲ್ಲ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬಹುದಾದ ಏಳು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಾಡುಗೊಲ್ಲ ಸಮಾಜಕ್ಕೆ ಕಡ್ಡಾಯವಾಗಿ ನೀಡಬೇಕು ಹಾಗೆ ಜಾತಿ ಪಟ್ಟಿಯಲ್ಲಿ ಕಾಡುಗೊಲ್ಲ ಸಮಾಜವನ್ನು ಸೇರಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ, ಲಕ್ಷ್ಮಣ್ ರಾಮಲಿಂಗಪ್ಪ ಮುಂತಾದವರು ಹಾಜರಿದ್ದರು.