ಸಾರಾಂಶ
ಯಾವುದೇ ಕ್ಷೇತ್ರದಲ್ಲಿ ಹಿಂಜರಿಕೆ ಇರಬಾರದು. ಧೈರ್ಯದಿಂದ ಮುನ್ನಗ್ಗಬೇಕು. ಅನುಕಂಪಕ್ಕಾಗಿ ಕಾಯಬೇಡಿ. ಅವಕಾಶ ಪಡೆದುಕೊಳ್ಳಬೇಕು. ಆಗ ಮಾತ್ರ ನಿಮಗೆ ಯಶಸ್ಸು ಸಿಗುತ್ತದೆ. ಮಾನಸಿಕವಾಗಿ ಸದೃಢವಾಗಿ ಇರಬೇಕು. ಎಲ್ಲರಿಗೂ ಸರ್ಕಾರದ ಸೌಲಭ್ಯ ಸಿಗುವುದಿಲ್ಲ. ಇನ್ನೊಬ್ನರ ಮೇಲೆ ಅವಲಂಬಿತರಾಗದೇ, ನಿಮ್ಮ ಸ್ವಂತ ದುಡಿಮೆಯಿಂದ ಬದುಕು ಸಾಗಿಸಬೇಕು ಎಂದರು.
ಕನ್ನಡಪ್ರಭ ವಾರ್ತೆ ಹೊಸಪೇಟೆ
ಅಂಗವಿಕಲರಿಗೆ ಅನುಕಂಪ ಬೇಕಾಗಿಲ್ಲ. ಅವರಿಗೆ ಅವಕಾಶ ಬೇಕಾಗಿದೆ. ಹಾಗಾಗಿ ಅವಕಾಶ ಕಲ್ಪಿಸಿಕೊಟ್ಟರೆ ಖಂಡಿತ ಅವರು ಸಮಾಜದ ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಕಾನೂನು ಸೇವಾ ಸಮಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಆಶ್ರಯದಲ್ಲಿ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಾವುದೇ ಕ್ಷೇತ್ರದಲ್ಲಿ ಹಿಂಜರಿಕೆ ಇರಬಾರದು. ಧೈರ್ಯದಿಂದ ಮುನ್ನಗ್ಗಬೇಕು. ಅನುಕಂಪಕ್ಕಾಗಿ ಕಾಯಬೇಡಿ. ಅವಕಾಶ ಪಡೆದುಕೊಳ್ಳಬೇಕು. ಆಗ ಮಾತ್ರ ನಿಮಗೆ ಯಶಸ್ಸು ಸಿಗುತ್ತದೆ. ಮಾನಸಿಕವಾಗಿ ಸದೃಢವಾಗಿ ಇರಬೇಕು. ಎಲ್ಲರಿಗೂ ಸರ್ಕಾರದ ಸೌಲಭ್ಯ ಸಿಗುವುದಿಲ್ಲ. ಇನ್ನೊಬ್ನರ ಮೇಲೆ ಅವಲಂಬಿತರಾಗದೇ, ನಿಮ್ಮ ಸ್ವಂತ ದುಡಿಮೆಯಿಂದ ಬದುಕು ಸಾಗಿಸಬೇಕು ಎಂದರು.ನಿಮ್ಮ ಜತೆ ಜಿಲ್ಲಾಡಳಿತ ಇರುತ್ತದೆ ಯಾವುದೇ ಅವಕಾಶಗಳು ಬಂದರೆ ನಿಮಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಕೃಷ್ಣ ಎಲ್. ಬಾಕಳೆ, ಜಿಪಂ ಉಪಕಾರ್ಯದರ್ಶಿ ಭೀಮಪ್ಪ ಲಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿಂಧು ಯಲಿಗಾರ, ನಗರಸಭೆ ಅಧ್ಯಕ್ಷೆ ಎ. ಲತಾ, ತಾಪಂ ಅಧಿಕಾರಿ ಉಮಾ ಮತ್ತಿತರರಿದ್ದರು. ಜಿಲ್ಲೆಯ ವಿವಿಧೆಡೆಯಿಂದ ಅಂಗವಿಕಲರು ಆಗಮಿಸಿದ್ದರು.