ಸಾರಾಂಶ
ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ವಿಶೇಷಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಬಂದಾಗ ಮೊದಲ ಆದ್ಯತೆ ನೀಡಬೇಕು. ಅವರಿಗೆ ಮೊದಲು ಅವಕಾಶ ಕಲ್ಪಿಸಿ ಕಾರ್ಯನಿರ್ವಹಣೆ ಮಾಡಬೇಕು
ರಾಣಿಬೆನ್ನೂರು: ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ವಿಶೇಷಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಬಂದಾಗ ಮೊದಲ ಆದ್ಯತೆ ನೀಡಬೇಕು. ಅವರಿಗೆ ಮೊದಲು ಅವಕಾಶ ಕಲ್ಪಿಸಿ ಕಾರ್ಯನಿರ್ವಹಣೆ ಮಾಡಬೇಕು ಎಂದು ನ್ಯಾಯಾಧೀಶೆ ಅನಿತಾ ಒ.ಎ. ಹೇಳಿದರು.
ನಗರದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಹಾಗೂ ತಾಪಂ ವತಿಯಿಂದ ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆಯ ನಿಮಿತ್ತ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನ್ಯಾಯವಾದಿ ನಂದಿನಿ ಜೋಶಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಬಿ.ಎಚ್. ಬುರುಡಿಕಟ್ಟಿ, ಕಾರ್ಯದರ್ಶಿ ಎನ್.ಎಂ. ಡಂಬೂರ, ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಕದರಮಂಡಲಗಿ, ಸಂಗೀತಾ ಕೆ.ಕೆ., ತಾಪಂ ನಿರ್ದೇಶಕಿ ಡಿ.ಡಿ. ಗೊಂದಿ, ಪರಶುರಾಮ ಪೂಜಾರ, ತಿಪ್ಪೇಶ ಗಾಡಿ, ರಾಜು ಹಂಗರಗಿ ಮತ್ತಿತರರು ಉಪಸ್ಥಿತರಿದ್ದರು.