ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ: ಶಾಸಕ ದೊಡ್ಡನಗೌಡ ಪಾಟೀಲ

| Published : Nov 18 2025, 01:15 AM IST

ಸಾರಾಂಶ

ಆಸ್ಪತ್ರೆಗೆ ಬರುವ ಜನರಿಗೆ ಸೂಕ್ತವಾದ ಚಿಕಿತ್ಸೆ ಕೊಡಬೇಕು. ಸಮರ್ಪಕ ಔಷಧಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಕುಷ್ಟಗಿ: ಪಟ್ಟಣದ ರೈಲ್ವೆ ನಿಲ್ದಾಣದ ಹತ್ತಿರ ಇರುವ ಮಾರುತಿ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಸ್ಥಾಪಿಸಲಾದ ನಗರ ಆಯುಷ್ಮಾನ್ ಆರೋಗ್ಯ ಮಂದಿರ ನಮ್ಮ ಕ್ಲಿನಿಕ್‌ ಅನ್ನು ಶಾಸಕ ದೊಡ್ಡನಗೌಡ ಪಾಟೀಲ ಉದ್ಘಾಟಿಸಿದರು.

ಬಳಿಕ ಆಸ್ಪತ್ರೆಯನ್ನು ವೀಕ್ಷಿಸಿದ ಅವರು ಮಾತನಾಡಿ, ಆಸ್ಪತ್ರೆಗೆ ಬರುವ ಜನರಿಗೆ ಸೂಕ್ತವಾದ ಚಿಕಿತ್ಸೆ ಕೊಡಬೇಕು. ಸಮರ್ಪಕ ಔಷಧಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಗೋಟೂರು ಮಾತನಾಡಿ, ಸ್ಥಳೀಯರ ಆರೋಗ್ಯದ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಉದ್ಘಾಟಿಸಲಾಗಿದ್ದು, ಆರೋಗ್ಯ ಇಲಾಖೆಯಿಂದ ಉತ್ತಮ ಸೇವೆ ನೀಡುವ ಉದ್ದೇಶವನ್ನು ಹೊಂದಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ರೋಗ ಬಂದ ಬಳಿಕ ಎಚ್ಚೆತ್ತುಕೊಳ್ಳುವ ಬದಲಿಗೆ ರೋಗ ಬರದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಡಾ. ಜಗದೀಶಗೌಡ, ಡಾ. ಪೂಜಾ, ಡಾ. ಪ್ರಶಾಂತ ತಾಳಿಕೋಟಿ, ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ಸೋಮಶೇಖರ್ ಮೇಟಿ, ವಿಬಿಡಿ ತಾಂತ್ರಿಕ ಮೇಲ್ವಿಚಾರಕ ಪ್ರಕಾಶ ಗುತ್ತೇದಾರ, ಆರೋಗ್ಯ ಮೇಲ್ವಿಚಾರಕ ಸಂಗಯ್ಯ ಕಂಠಿಮಠ ಸೇರಿದಂತೆ ಮಾರುತಿ ನಗರದ ನಿವಾಸಿಗಳು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.