ಚನ್ನಗಿರಿ ಪಟ್ಟಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ: ಸಂಸದೆ

| Published : Mar 01 2025, 01:00 AM IST

ಸಾರಾಂಶ

ಪಟ್ಟಣದ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಮತ್ತು ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತ ಪಟ್ಟಣದ ನಾಗರೀಕರಿಗೆ ಮೂಲಸೌಲಭ್ಯಗಳನ್ನು ಒದಗಿಸಬೇಕು. ಆ ಮೂಲಕ ಉತ್ತಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

-ಪುರಸಭೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ । ಗಣ್ಯರ ಅಭಿನಂದನೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ಪಟ್ಟಣದ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಮತ್ತು ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತ ಪಟ್ಟಣದ ನಾಗರೀಕರಿಗೆ ಮೂಲಸೌಲಭ್ಯಗಳನ್ನು ಒದಗಿಸಬೇಕು. ಆ ಮೂಲಕ ಉತ್ತಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಶುಕ್ರವಾರ ಪಟ್ಟಣದ ಪುರಸಭೆಯ 2ನೇ ಅವಧಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಪುರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರಾಗಿ ಮಹಿಳೆಯರೇ ಆಯ್ಕೆ ಆಗಿರುವುದರಿಂದ ಸ್ಥಳೀಯ ಆದಾಯ ವೃದ್ಧಿಸಿಕೊಂಡು ಪುರಸಭೆ ಪ್ರಗತಿದಾಯಕವಾಗಿ ನಡೆಯುವಂತೆ ಮಾಡಬೇಕು ಎಂದರು.

ಚನ್ನಗಿರಿ ಪಟ್ಟಣದ ಹೊರವಲಯದಲ್ಲಿ ಕೆ.ಎಸ್.ಆರ್.ಟಿ.ಸಿ. ಡಿಪೋ ಕಾಮಗಾರಿ ಕೆಲಸ ಸಂಪೂರ್ಣಗೊಂಡಿದೆ. ಇದರ ಉದ್ಘಾಟನೆ ಯಾವಾಗ ಎಂದು ಮಾಧ್ಯಮದವರು ಸಂಸದರನ್ನು ಕೇಳಿದರು. ಆಗ ಈ ಬಗ್ಗೆ ಮಾಹಿತಿಯನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಂಸದರು ಭರವಸೆ ನೀಡಿದರು.

ಶಾಸಕ ಬಸವರಾಜ ವಿ.ಶಿವಗಂಗಾ ಮಾತನಾಡಿ, ಚನ್ನಗಿರಿ ಪುರಸಭೆಗೆ ಇಲ್ಲಿಯವರೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಇರಲಿಲ್ಲ. ಈ ದಿನದಿಂದ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಗೊಂಡಿದ್ದು ಪಟ್ಟಣದ ಸ್ವಚ್ಛತೆಯಿಂದ ಹಿಡಿದು ಶುದ್ಧ ಕುಡಿಯುವ ನೀರು ಪೂರೈಕೆ, ಬೀದಿದೀಪ ಮತ್ತು ಪಟ್ಟಣದ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ತೀರ್ಮಾನಿಸಿ, ಅಭಿವೃದ್ಧಿಗೆ ಶ್ರಮಿಸುವಂತೆ ಎಂದು ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸೂಚಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಕಾಂಗ್ರೆಸ್ ಸದಸ್ಯರು ಹಾಜರಿದ್ದರು.

- - - -28ಕೆಸಿಎನ್‌ಜಿ2.ಜೆಪಿಜಿ:

ಚನ್ನಗಿರಿ ಪುರಸಭೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿನಂದಿಸಿದರು.