ಸಾರಾಂಶ
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದೇನೆ. ಈ ಸಂಬಂಧ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ರಸ್ತೆಗಳು ಅಭಿವೃದ್ಧಿ ಸಂಕೇತ. ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ಉತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ತಾಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ನಿಡಘಟ್ಟ ಕದಲೂರು ಸಂಪರ್ಕ ರಸ್ತೆಗೆ 75 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ನಾನು ಶಾಸಕನಾದ ನಂತರ ಸರ್ಕಾರದಿಂದ ವಿಶೇಷ ಅನುದಾನಗಳನ್ನು ತಂದು ರಸ್ತೆಗಳ ನಿರ್ಮಾಣಕ್ಕೆ ಮುಂದಾಗಿರುವುದಾಗಿ ತಿಳಿಸಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದೇನೆ. ಈ ಸಂಬಂಧ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟು ವಿಶೇಷ ಅನುದಾನಗಳನ್ನು ತಂದು ಹಳ್ಳಿಗಳ ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಿದ್ದು, ಅನುದಾನ ಬಿಡುಗಡೆಯಾದ ನಂತರ ಅಭಿವೃದ್ಧಿ ಪರ್ವ ಮುಂದುವರೆಯಲಿದೆ ಎಂದರು.
ಈ ವೇಳೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಆರ್.ಮಹೇಶ್, ಗ್ರಾಪಂ ಅಧ್ಯಕ್ಷ ತಿಮ್ಮೆಗೌಡ, ಉಪಾಧ್ಯಕ್ಷೆ ರತ್ನಮ್ಮ, ಮಾಜಿ ಅಧ್ಯಕ್ಷೆ ಜಯಲಕ್ಷ್ಮಮ್ಮ, ಗುತ್ತಿಗೆದಾರ ತಮ್ಮಣ್ಣ, ಮುಖಂಡರಾದ ಕೆ.ಎಂ.ರವಿ, ಕುಳ್ಳಪ್ಪ, ರಾಮಣ್ಣ, ಕುಮಾರ್, ಶೇಷಯ್ಯ ಸೇರಿದಂತೆ ಇತರರು ಇದ್ದರು.