ಸದಸ್ಯತ್ವ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಿ

| Published : Mar 30 2025, 03:05 AM IST

ಸಾರಾಂಶ

ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನವು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಕೂಡ ಸದಸ್ಯತ್ವ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಬೀದರ್ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನವು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಕೂಡ ಸದಸ್ಯತ್ವ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಕರೆ ನೀಡಿದರು.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರೆಲ್ಲರೂ ಸೇರಿ ಪಕ್ಷ ಸಂಘಟನೆಗೆ ಶ್ರಮಿಸಬೇಕು. ನಾವು ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿಗಳಿಗೆ ತೆರಳಿ ಸದಸ್ಯತ್ವ ನೋಂದಣಿ ಮಾಡಿಸುವ ಕೆಲಸ ಮಾಡಬೇಕಾಗಿದೆ. ಹಳ್ಳಿಗಳಲ್ಲಿ ಜೆಡಿಎಸ್‌ಗೆ ಹೆಚ್ಚಿನ ಮಹತ್ವವಿದೆ. ಜಿಪಂ, ತಾಪಂ ಚುನಾವಣೆಗಳು ಶೀಘ್ರವಾಗಿ ಬರಲಿವೆ. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದರು.ಸದಸ್ಯತ್ವ ನೋಂದಣಿ ವಿಷಯದಲ್ಲಿ ಬೀದರ್ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಯಾವಾಗಲೂ ಮುಂದೆ ಇದ್ದಾರೆ. ಈ ಹಿಂದೆ ರಾಜ್ಯದಲ್ಲಿಯೇ ಹೆಚ್ಚಿನ ಸದಸ್ಯತ್ವ ನೋಂದಣಿ ಬೀದರ್ ಜಿಲ್ಲೆಯಿಂದ ಆಗಿತ್ತು. ಅದನ್ನು ಮರುಕಳಿಸುವ ಕೆಲಸವನ್ನು ಈ ಬಾರಿ ಕೂಡ ಎಲ್ಲರೂ ಸೇರಿ ಮಾಡಬೇಕು ಎಂದು ತಿಳಿಸಿದರು.ಈ ವೇಳೆ ಸದಸ್ಯತ್ವ ನೋಂದಣಿ ಪುಸ್ತಕ ಬಿಡುಗಡೆ ಮಾಡಲಾಯಿತು. ಪಕ್ಷದ ತಾಲೂಕು ಚುನಾವಣೆ ಅಧಿಕಾರಿಗಳು ಹಾಗೂ ತಾಲೂಕು ಸಹಾಯಕ ಚುನಾವಣೆ ಅಧಿಕಾರಿಗಳಾಗಿ ನೇಮಕಗೊಂಡ ಅನೇಕರಿಗೆ ಆದೇಶ ಪತ್ರ ನೀಡಲಾಯಿತು.ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್, ಪ್ರಮುಖರಾದ ಅಶೋಕ್ ಕೊಡ್ಗೆ, ಐಲಿನ್ ಜಾನ್ ಮಠಪತಿ, ಸಿದ್ರಾಮಪ್ಪ ವಂಕೆ, ರಾಜಶೇಖರ ಜವಳೆ, ಸುರೇಶ್ ಸಿಗಿ, ಶಿವಪುತ್ರ ಮಾಳ್ಗೆ, ಶಬ್ಬೀರ್ ಪಾಷಾ, ಆಕಾಶ್ ಖಂಡಾಳೆ, ಬಸವರಾಜ ಪಾಟೀಲ್ ಹಾರೋಗೇರಿ, ಮಲ್ಲಿಕಾರ್ಜುನ ನೆಳ್ಗೆ, ಗೌತಮ್ ಸಾಗರ್, ಲಲಿತಾ ಕರಂಜೆ, ಬೊಮ್ಮಗೊಂಡ ಚಿಟ್ಟಾವಾಡಿ, ಜಾಪೇಡ್ ಕಡ್ಯಾಳ, ಅಭಿ ಕಾಳೆ, ಸಂಗಮ್ಮ ಪಾಟೀಲ್, ಬಸವರಾಜ ಶಾಹಪೂರೆ, ರವಿ ಸಿರ್ಸಿ ಇದ್ದರು.