ಜನರಿಗೆ ಪ್ರಾಮಾಣಿಕ ಸೇವೆ ನೀಡಿ

| Published : Nov 15 2025, 03:00 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಗೋಕಾಕ ಜನರ ಆರ್ಥಿಕ ಪ್ರಗತಿಯಲ್ಲಿ ಸಹಕಾರಿ ಸಂಘಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ನಗರದ ಸಮುದಾಯ ಭವನದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಳಗಾವಿಯ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಗೋಕಾಕದ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಅವರು ಪಾಲ್ಗೊಂಡು ಮಾತನಾಡುತ್ತಿದ್ದರು.

ಕನ್ನಡಪ್ರಭ ವಾರ್ತೆ ಗೋಕಾಕ

ಜನರ ಆರ್ಥಿಕ ಪ್ರಗತಿಯಲ್ಲಿ ಸಹಕಾರಿ ಸಂಘಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ನಗರದ ಸಮುದಾಯ ಭವನದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಳಗಾವಿಯ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಗೋಕಾಕದ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಅವರು ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶವನ್ನು ಸ್ವಾವಲಂಬಿ ಮಾಡಲು ವಿವಿಧ ಕಾರ್ಯಕ್ರಮಗಳ ಮೂಲಕ ಕಾರ್ಯಪ್ರವೃತ್ತರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಹಕಾರ ರಂಗವೂ ಸಹಕಾರ ನೀಡಬೇಕು. ಸಹಕಾರಿ ರಂಗಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಅಲ್ಲದೇ, ಜನರಿಗೆ ಪ್ರಾಮಾಣಿಕ ಸೇವೆಯನ್ನು ಕಲ್ಪಿಸಿ, ಶಾಸಕರ ಮಾರ್ಗದರ್ಶನದಲ್ಲಿ ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸಬೇಕಿದೆ. ಮತ್ತು ಸಂಘಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿ ಸದಸ್ಯರಿಗೆ ಪಾರದರ್ಶಕ ಸೇವೆಯನ್ನು ನೀಡುವಂತೆ ಅವರು ಕರೆ ನೀಡಿದರು.ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ರಾಜ್ಯದಲ್ಲಿ ಸಿದ್ದನಗೌಡ ಪಾಟೀಲ ಸಹಕಾರಿ ಕ್ಷೇತ್ರವನ್ನು ಪ್ರಾರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ಪಿತಾಮಹರಾಗಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ. ಈ ಸಮಾಜದಲ್ಲಿ ಜಾತಿ ಮತ ಹಾಗೂ ಬಡವ ಶ್ರೀಮಂತರೆಂಬ ಬೇಧ ಭಾವವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಕ್ಷೇತ್ರ ಇದಾಗಿದೆ ಎಂದು ಹೇಳಿದರು.

ಈ ಸಹಕಾರಿ ಸಪ್ತಾಹವನ್ನು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು. ವೇದಿಕೆಯ ಮೇಲೆ ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ನಿರ್ದೇಶಕರಾದ ಡಾ.ಸಂಜಯ ಹೊಸಮಠ, ತಮ್ಮಣ್ಣ ಕೆಂಚರೆಡ್ಡಿ, ಬಸವರಾಜ ಕಲ್ಯಾಣಶೆಟ್ಟಿ, ಜಿಲ್ಲಾ ಯುನಿಯನ್‌ನ ಬಸಪ್ಪ ಸಂತಿ, ವರ್ಧಮಾನ ಬೊಳಿ, ಶಿವಪ್ಪ ಮರ್ದಿ, ಟಿಎಪಿಸಿಎಮ್‌ಎಸ್‌ನ ಅಧ್ಯಕ್ಷ ಅಶೋಕ ನಾಯಕ, ಉಪಾಧ್ಯಕ್ಷ ವಿಠ್ಠಲ ಪಾಟೀಲ, ಪ್ರಭಾ ಶುಗರ್‌ ನಿರ್ದೇಶಕ ಬಸಗೌಡ ಪಾಟೀಲ, ರಾಜು ಭೈರುಗೋಳ, ಟಿ.ಆರ್.ಕಾಗಲ, ಎಮ್.ಎಲ್.ತೋಳಿನವರ, ವಿಠ್ಠಲ ಸವದತ್ತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶಾಹೀನ ಅಕ್ತಾರ, ಅರ್ಬನ್ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಎಸ್.ಎಸ್.ಪಾಟೀಲ, ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ, ಡಿಸಿಸಿ ಬ್ಯಾಂಕ್‌ನ ಮಹಾಂತೇಶ ಕುರಬೇಟ, ಯುನಿಯನ್‌ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಲಪ್ಪ ಜಗ್ಗಿನವರ, ಟಿಎಪಿಸಿಎಮ್‌ಎಸ್‌ನ ವ್ಯವಸ್ಥಾಪಕ ಗಂಗಾಧರ ಹಾರುಗೊಪ್ಪ ಸೇರಿದಂತೆ ಇನ್ನು ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.