ಕನ್ನಡಪ್ರಭ ವಾರ್ತೆ ಅರಸೀಕೆರೆರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆ ನಡೆಸಿದರು.ನಗರದ ಪಿ.ಪಿ. ವೃತ್ತದಲ್ಲಿ ಅಖಿಲ ಕರ್ನಾಟಕ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗ ಒಕ್ಕೂಟ, ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕ ಹಾಗೂ ಬೆಂಬಲಿಗರು ಸೇರಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಲು ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಜಮೀರ್ ಅಹ್ಮದ್ ಅಭಿಮಾನಿ ಬಳಗದ ಅಧ್ಯಕ್ಷ ಶಿರಾಜ್ ಅಲಿ ಬೇಗ್, ನೂತನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಅವಕಾಶ ಸಿಗದಿರುವುದು ಅಲ್ಪಸಂಖ್ಯಾತ ಸಮುದಾಯಕ್ಕೆ ನಿರಾಸೆ ತಂದಿದೆ ಎಂದು ಹೇಳಿದರು. ಕೆಲ ವಿರೋಧಿ ಶಕ್ತಿಗಳು ಹರಿಬಿಟ್ಟ ಆಡಿಯೋಗಳ ಆಧಾರದ ಮೇಲೆ ಹಿರಿಯ ನಾಯಕರ ರಾಜಕೀಯ ಸೇವೆಯನ್ನು ಕಡೆಗಣಿಸುವುದು ಸರಿಯಲ್ಲ ಎಂದರು. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಜಮೀರ್ ಅಹ್ಮದ್ ಖಾನ್ ಅವರು ಸಲ್ಲಿಸಿರುವ ಸೇವೆ ಗಮನಾರ್ಹವಾಗಿದ್ದು, ಅಲ್ಪಸಂಖ್ಯಾತ ಸಮುದಾಯವನ್ನು ಪಕ್ಷದೊಂದಿಗೆ ಸಂಘಟಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.ಅದೇ ವೇಳೆ, ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಇಬ್ಬರು ನಾಯಕರಿಗೂ ಸೂಕ್ತ ಸ್ಥಾನಮಾನ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಮೀರ್ಗೆ ಡಿಸಿಎಂ ಹಾಗೂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ
ಜಮೀರ್ ಅಹ್ಮದ್ ಅಭಿಮಾನಿ ಬಳಗದ ಅಧ್ಯಕ್ಷ ಶಿರಾಜ್ ಅಲಿ ಬೇಗ್, ನೂತನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಅವಕಾಶ ಸಿಗದಿರುವುದು ಅಲ್ಪಸಂಖ್ಯಾತ ಸಮುದಾಯಕ್ಕೆ ನಿರಾಸೆ ತಂದಿದೆ ಎಂದು ಹೇಳಿದರು. ಕೆಲ ವಿರೋಧಿ ಶಕ್ತಿಗಳು ಹರಿಬಿಟ್ಟ ಆಡಿಯೋಗಳ ಆಧಾರದ ಮೇಲೆ ಹಿರಿಯ ನಾಯಕರ ರಾಜಕೀಯ ಸೇವೆಯನ್ನು ಕಡೆಗಣಿಸುವುದು ಸರಿಯಲ್ಲ ಎಂದರು. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಜಮೀರ್ ಅಹ್ಮದ್ ಖಾನ್ ಅವರು ಸಲ್ಲಿಸಿರುವ ಸೇವೆ ಗಮನಾರ್ಹವಾಗಿದ್ದು, ಅಲ್ಪಸಂಖ್ಯಾತ ಸಮುದಾಯವನ್ನು ಪಕ್ಷದೊಂದಿಗೆ ಸಂಘಟಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.