ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ

| N/A | Published : Sep 16 2025, 12:03 AM IST

ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
Share this Article
  • FB
  • TW
  • Linkdin
  • Email

ಸಾರಾಂಶ

ಸಾಹಸಿಂಹ ಡಾ। ವಿಷ್ಣುವರ್ಧನ್‌ ಮತ್ತು ರೆಬಲ್‌ಸ್ಟಾರ್‌ ಅಂಬರೀಷ್‌ ಅವರಿಬ್ಬರೂ ಕನ್ನಡ ಚಿತ್ರರಂಗದ ಕುಚುಕುಗಳಾಗಿದ್ದವರು. ಹಾಗಾಗಿ ವಿಷ್ಣುವರ್ಧನ್‌ ಅವರೊಂದಿಗೆ ಅಂಬರೀಷ್‌ ಅವರಿಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕೆಂದು ನಟಿ ತಾರಾ ಅನುರಾಧಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

 ಬೆಂಗಳೂರು :  ಸಾಹಸಿಂಹ ಡಾ। ವಿಷ್ಣುವರ್ಧನ್‌ ಮತ್ತು ರೆಬಲ್‌ಸ್ಟಾರ್‌ ಅಂಬರೀಷ್‌ ಅವರಿಬ್ಬರೂ ಕನ್ನಡ ಚಿತ್ರರಂಗದ ಕುಚುಕುಗಳಾಗಿದ್ದವರು. ಹಾಗಾಗಿ ವಿಷ್ಣುವರ್ಧನ್‌ ಅವರೊಂದಿಗೆ ಅಂಬರೀಷ್‌ ಅವರಿಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕೆಂದು ನಟಿ ತಾರಾ ಅನುರಾಧಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಇದಕ್ಕೆ, ಇಬ್ಬರೂ ನಾಯಕರು ಇದು ಸಚಿವ ಸಂಪುಟದಲ್ಲಿ ಚರ್ಚಿಸಬೇಕಾದ ವಿಷಯವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅಂಬರೀಶ್‌ ಅವರಿಗೂ ಕರ್ನಾಟಕ ರತ್ನ ನೀಡುವ ವಿಷಯ ತಂದು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.

ಈ ಸಂಬಂಧ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ತಾರಾ ಅವರು, ಡಾ। ಅಂಬರೀಷ್‌ ಅವರಿಗೂ ಕರ್ನಾಟಕ ರತ್ನ ನೋಡಿದರೆ ಈ ಖುಷಿ, ಸಂತೋಷ ಎಲ್ಲರಲ್ಲಿ ಇನ್ನಷ್ಟು ಹೆಚ್ಚಾಗುತ್ತದೆ. ಏಕೆಂದರೆ ವಿಷ್ಣುವರ್ಧನ್‌ ಮತ್ತು ಅಂಬರೀಷ್‌ ಇಬ್ಬರೂ ಚಿತ್ರರಂಗದ ಕುಚುಕುಗಳು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರಿಬ್ಬರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಟ್ಟು ಮನವಿ ಮಾಡಿದ್ದೇನೆ. ಅವರು ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಮಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Read more Articles on