ಕನ್ನಡಪ್ರಭ ವಾರ್ತೆ ಬಾಗಲಕೋಟೆಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಗಾಣಿಗ ಸಮೂಹ ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ ಚೊಳಚಗುಡ್ಡ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಗಾಣಿಗ ಸಮೂಹ ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ ಚೊಳಚಗುಡ್ಡ ಆಗ್ರಹಿಸಿದ್ದಾರೆ.

ನಗರದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಸಾರ್ವತ್ರಿಕ ಚುನಾವಣೆ ಬಿಜೆಪಿ ತೊರೆದು ಕಾಂಗ್ರೆಸ ಪಕ್ಷ ಸೇರಿ ಅಥಣಿ ಮತಕ್ಷೇತ್ರದಿಂದ ಅತಿ ಹೆಚ್ಚು ಮತ ಪಡೆದು ಸವದಿ ಗೆದ್ದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಲಕ್ಷ್ಮಣ ಸವದಿ ಅವರು ಗಾಣಿಗರ ಮತ ಹಾಕಿಸಿ ಗೆಲ್ಲಿಸಲು ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ನೀಡಿದ ಮಾತಿಗೆ ಬದ್ಧರಾಗಿ ಸವದಿ ಅವರಿಗೆ 2ನೇ ಪಟ್ಟಿಯಲ್ಲಾದರೂ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಗಾಣಿಗ ಸಮಾಜದಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಸಮಾಜದ ಸಿದ್ದು ನ್ಯಾಮಗೌಡ ಅವರಿಗೆ ಕೇಂದ್ರ ಸಚಿವ ಸ್ಥಾನ ಕೊಟ್ಟಿದ್ದು ಬಿಟ್ಟರೇ ಯಾರಿಗೂ ನೀಡಿಲ್ಲ. ಸಂಪುಟ ದರ್ಜೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಗಾಣಿಗ ನೌಕರರ ಸಂಘದ ರಾಜ್ಯಾಧ್ಯಕ್ಷ ಆರ್.ಜಿ.ಪಾಟೀಲ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಶೇಖರ ಪಾಟೀಲ, ಗುರು ಸಂಗಮದ, ಕಮಲ್ಲಪ್ಪ ಗಾಣಿಗೇರ ಇತರರು ಇದ್ದರು.