ಮುರುಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್‌ ನೀಡಿ: ಕಾಂಗ್ರೆಸ್ ಮುಖಂಡರು

| Published : Jan 29 2024, 01:31 AM IST

ಮುರುಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್‌ ನೀಡಿ: ಕಾಂಗ್ರೆಸ್ ಮುಖಂಡರು
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಮುಖಂಡರ ಒತ್ತಾಯವಾಗಿದೆ.

ಕನ್ನಡಪ್ರಭವಾರ್ತೆ ತುರುವೇಕೆರೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಜಿಲ್ಲಾ ಕಾಂಗ್ರೆಸ್ ಮುಖಂಡರು, ರಾಜ್ಯ ಕೌಶಲ್ಯಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದ ಮುರಳೀಧರ್ ಹಾಲಪ್ಪ ಅವರಿಗೆ ಟಿಕೆಟ್ ನೀಡಬೇಕೆಂದು ತಾಲೂಕಿನ ಹಲವಾರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ ಕಾಂಗ್ರೆಸ್‌ನ ವರಿಷ್ಠರನ್ನು ಆಗ್ರಹಿಸಿದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪಟ್ಟಣ ಪಂಚಾಯ್ತಿಯ ಸದಸ್ಯ ಯಜಮಾನ್ ಮಹೇಶ್, ಮುರಳೀಧರ್ ಹಾಲಪ್ಪ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತರಾಗಿ, ಮುಖಂಡರಾದ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ರೈತರ ಪರವಾಗಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ರೈತರಿಗೆ ವಿವಿಧ ರೀತಿಯ ತರಬೇತಿಯನ್ನು ಸಹ ಸಂಬಂಧಪಟ್ಟವರಿಂದ ಕೊಡಿಸಿದ್ದಾರೆ. ಜಿಲ್ಲೆಯಲ್ಲಿ ಅಪಾರ ಜನ ಬಲ ಪಡೆದಿರುವ ಕಾಂಗ್ರೆಸ್ ಹಿರಿಯ ಮುಖಂಡರು ಮುರಳೀಧರ ಹಾಲಪ್ಪರ ಸೇವೆಯನ್ನು ಪರಿಗಣಿಸಿ ತುಮಕೂರು ಲೋಕಸಭಾಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ ಎಂದು ಯಜಮಾನ್ ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಡಗಿಹಳ್ಳಿ ಹನುಮಂತಯ್ಯ ಮಾತನಾಡಿ, ಪಕ್ಷದಲ್ಲಿ ದುಡಿದಂತಹ ಕಾರ್ಯಕರ್ತರನ್ನು, ಮುಖಂಡರನ್ನು ಗುರುತಿಸಿ ಹೈಕಮಾಂಡ್ ಟಿಕೆಟ್ ನೀಡುತ್ತದೆ. ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಹಲವು ಜನಪರ ಯೋಜನೆಗಳಿಂದ ಪ್ರಭಾವಿತರಾಗಿರುವ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವರು. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿರುವ ಮುರಳೀಧರ ಹಾಲಪ್ಪನವರಿಗೇ ಟಿಕೆಟ್ ನೀಡಬೇಕು. ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರುವ ಮುರಳೀಧರ ಹಾಲಪ್ಪರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಕಾರ್ಯಕರ್ತರು ಬಹಳ ಹುಮ್ಮಸ್ಸಿನಿಂದ ದುಡಿಯಲಿದ್ದಾರೆ ಎಂದು ಹೇಳಿದರು.

ಸೇವಾದಳದ ತಾಲೂಕು ಅಧ್ಯಕ್ಷ ಮಂಜುನಾಥ್ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಸಿ.ಎಸ್.ಟಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮಯ್ಯ, ಸವಿತಾ ಸಮಾಜದ ಅಧ್ಯಕ್ಷ ಧನು, ರೈತ ಸಂಘದ ಮುಖಂಡ ರಾಜಪ್ಪ, ಮುಸ್ಲಿಂ ಮುಖಂಡ ಸೈಯದ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀನಿವಾಸ್ ಮುಖಂಡರಾದ ಮೂರ್ತಿ, ವೆಂಕಟೇಶ್, ಲೋಕೇಶ್, ಕಲ್ಲೂರು ಭಾಗ್ಯಮ್ಮ ಸೇರಿದಂತೆ ಹಲವು ಮುಖಂಡರು ಇದ್ದರು.