ನಿಮ್ಮೆಲ್ಲರ ಸೇವೆಗಾಗಿ ನನಗೊಂದು ಅವಕಾಶ ಕೊಡಿ: ವಕೀಲರಿಗೆ ಎಂ. ಲಕ್ಷ್ಮಣ ಮನವಿ

| Published : Apr 05 2024, 01:03 AM IST

ನಿಮ್ಮೆಲ್ಲರ ಸೇವೆಗಾಗಿ ನನಗೊಂದು ಅವಕಾಶ ಕೊಡಿ: ವಕೀಲರಿಗೆ ಎಂ. ಲಕ್ಷ್ಮಣ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಪಾರ್ಲಿಮೆಂಟ್ ನಲ್ಲಿ ಸುಮ್ಮನೆ ಕುಳಿತು ಬರುವುದಿಲ್ಲ. ರಾಜ್ಯದ ಜನತೆಯ ಪರವಾಗಿ, ರಾಜ್ಯದ ಅಭಿವೃದ್ಧಿಯ ಪರವಾಗಿ ಮಾತನಾಡುತ್ತೇನೆ. ತಾವೆಲ್ಲರೂ ಮತ ನೀಡಿ ನನ್ನನು ಗೆಲ್ಲಿಸಿದ್ದಲ್ಲಿ ಸದಾ ಜನರ ಪರವಾಗಿದ್ದು, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತೇನೆ. ವಕೀಲರ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ. ನಿಮ್ಮೆಲ್ಲರ ಸೇವೆಗಾಗಿ ನನಗೊಂದು ಅವಕಾಶ ಕೊಡಿ.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ವಕೀಲರ ಸಂಘದ ಎಲ್ಲಾ ಸದಸ್ಯರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನನಗೆ ಬೆಂಬಲ ಸೂಚಿಸಿ ಹಾಗೂ ನಿಮ್ಮ ಮತಗಳನ್ನು ನೀಡಿ. ವಕೀಲರ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ. ನಿಮ್ಮೆಲ್ಲರ ಸೇವೆಗಾಗಿ ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಮತಯಾಚನೆ ಮಾಡಿದರು.

ನಗರದ ನ್ಯಾಯಾಲಯ ಆವರಣದ ಮೈಸೂರು ವಕೀಲರ ಸಂಘಕ್ಕೆ ಗುರುವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮತಯಾಚಿಸಿದ ಅವರು, ನಾನು ಪಾರ್ಲಿಮೆಂಟ್ ನಲ್ಲಿ ಸುಮ್ಮನೆ ಕುಳಿತು ಬರುವುದಿಲ್ಲ. ರಾಜ್ಯದ ಜನತೆಯ ಪರವಾಗಿ, ರಾಜ್ಯದ ಅಭಿವೃದ್ಧಿಯ ಪರವಾಗಿ ಮಾತನಾಡುತ್ತೇನೆ. ತಾವೆಲ್ಲರೂ ಮತ ನೀಡಿ ನನ್ನನು ಗೆಲ್ಲಿಸಿದ್ದಲ್ಲಿ ಸದಾ ಜನರ ಪರವಾಗಿದ್ದು, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತೇನೆ ಎಂದರು.

ಮೈಸೂರು ಮತ್ತು ಕೊಡಗು ಜಿಲ್ಲೆಯು ಪ್ರವಾಸೋದ್ಯಮ ಸ್ಥಳವನ್ನಾಗಿ ನಿರ್ಮಿಸಲು ಉತ್ತಮವಾದ ಸ್ಥಳವಾಗಿದೆ. ಇದರ ಜೊತೆಗೆ ಒಂದು ಲಕ್ಷ ಜನರಿಗೆ ಉದ್ಯೋಗವನ್ನು ಸೃಷ್ಟಿಸುವ ವಾತಾವರಣವಿದೆ. ಆದರೆ, ಈ ಕಾರ್ಯಕ್ಕೆ ಹಿಂದಿನ ಸಂಸದರು ಪ್ರಯತ್ನಿಸಲಿಲ್ಲ. ಈ ಮಹತ್ವದ ಕಾರ್ಯವನ್ನು ಮಾಡುವಲ್ಲಿ ನಾನು ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದರು.

ಸಂವಿಧಾನದ ಆಶಯಂತೆ ಕಾಂಗ್ರೆಸ್ ಸರ್ಕಾರ ಕೆಲಸ: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶಾಸಕ ತನ್ವೀರ್ ಶೇಠ್ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ದೊರೆಯಬೇಕು ಎಂಬಂತಹ ಮೂಲ ಉದ್ದೇಶವನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಸರ್ಕಾರವನ್ನು ನಡೆಸುತ್ತಿದೆ. ಸಮಾಜದ ಬಡತನವನ್ನು ನಿರ್ಮೂಲನೆ ಮಾಡಿ, ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಬೇಕು. ಶಿಕ್ಷಣದ ಸೌಲಭ್ಯ ಎಲ್ಲರಿಗೂ ಸಿಗಬೇಕು ಎಂಬಂತಹ ಸಂವಿಧಾನದ ಆಶಯಂತೆ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಮೈಸೂರು- ಕೊಡಗು ಲೋಕಸಭಾ ಅಭ್ಯರ್ಥಿಯಾಗಿ ಎಂ. ಲಕ್ಷ್ಮಣ ಅವರನ್ನು ಆಯ್ಕೆ ಮಾಡಿದ್ದೇವೆ. ಲಕ್ಷ್ಮಣ ಅವರು ಮೈಸೂರಿನ ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರು ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷಕ್ಕೆ ದುಡಿದಿದ್ದಾರೆ. ತಾವೆಲ್ಲರೂ ಹೆಚ್ಚಿನ ಸಹಕಾರ ನೀಡಿ ಅವರನ್ನು ಗೆಲ್ಲಿಸಿ. ಜನ ಸಾಮಾನ್ಯರ ಪರ ಕೆಲಸ ಮಾಡುತ್ತಾರೆ ಎಂದು ಅವರು ಹೇಳಿದರು.

ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್, ಕಾರ್ಯದರ್ಶಿ ಎ.ಜಿ. ಸುಧೀರ್, ಉಪಾಧ್ಯಕ್ಷ ಚಂದ್ರಶೇಖರ್, ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಕಾರ್ಯದರ್ಶಿ ಎಸ್. ಉಮೇಶ್, ಹಿರಿಯ ವಕೀಲರಾದ ಚಂದ್ರಮೌಳಿ,

ಮಾಜಿ ಮೇಯರ್ ಪುರುಷೋತ್ತಮ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ಪಾಲಿಕೆ ಮಾಜಿ ಸದಸ್ಯ ಸುನಿಲ್, ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಮೊದಲಾದವರು ಇದ್ದರು.