ಸಾರಾಂಶ
ಕನ್ನಡಪ್ರಭ ವಾರ್ತೆ ಕಾಗವಾಡ ನಾನೂ ಕೂಡ ಐದು ಬಾರಿ ಶಾಸಕನಾಗಿ ಆಯ್ಕೆಯಾಗಿ ಬಂದಿದ್ದೇನೆ. ಉತ್ತರ ಕರ್ನಾಟಕದಲ್ಲಿ ಹಿರಿಯ ಶಾಸಕನಾಗಿದ್ದು, ನಾನೂ ಸಚಿವಾಕಾಂಕ್ಷಿಯಾಗಿದ್ದೇನೆ. ಸಂಪುಟ ವಿಸ್ತರಣೆ ಸಮಯದಲ್ಲಿ ನನಗೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಈಗಾಗಲೇ ಆಗ್ರಹಿಸಿರುವೆ ಎಂದು ಶಾಸಕ ರಾಜು ಕಾಗೆ ಹೇಳಿದರು
ಕನ್ನಡಪ್ರಭ ವಾರ್ತೆ ಕಾಗವಾಡ
ನಾನೂ ಕೂಡ ಐದು ಬಾರಿ ಶಾಸಕನಾಗಿ ಆಯ್ಕೆಯಾಗಿ ಬಂದಿದ್ದೇನೆ. ಉತ್ತರ ಕರ್ನಾಟಕದಲ್ಲಿ ಹಿರಿಯ ಶಾಸಕನಾಗಿದ್ದು, ನಾನೂ ಸಚಿವಾಕಾಂಕ್ಷಿಯಾಗಿದ್ದೇನೆ. ಸಂಪುಟ ವಿಸ್ತರಣೆ ಸಮಯದಲ್ಲಿ ನನಗೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಈಗಾಗಲೇ ಆಗ್ರಹಿಸಿರುವೆ ಎಂದು ಶಾಸಕ ರಾಜು ಕಾಗೆ ಹೇಳಿದರು.ಕ್ಷೇತ್ರದ ಉಗಾರ ಬುದ್ರಕ್, ಶಿರಗುಪ್ಪಿ, ಜುಗೂಳ ಮತ್ತು ಲೋಕುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಚಾಲನೆ ನೀಡಿ ಮಾತನಾಡಿದ ಅವರು, ಕಾಗವಾಡ ಮತಕ್ಷೇತ್ರದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾಗೊಳಿಸುತ್ತಿರುವೆ. ಜನಪರ ಕಾಮಗಾರಿಗಳು ಅನುಷ್ಠಾನಗೊಳ್ಳುವ ಸಂದರ್ಭದಲ್ಲಿ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟದ ಕುರಿತು ಜಾಗೃತರಾಗಿರಬೇಕು. ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪ್ರಾರಂಭಿಸಿ ನಿಗದಿತ ಸಮಯದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಇನ್ನು, ಶಾಸಕ ರಾಜು ಕಾಗೆ ಉಗಾರ ಬುದ್ರಕ್ ಗ್ರಾಮದಲ್ಲಿ ಉಗಾರ, ಶಿರಗುಪ್ಪಿ ಗ್ರಾಮಕ್ಕೆ ಹೊಂದಿಕೊಂಡ ₹ 2 ಕೋಟಿ ವೆಚ್ಚದ ಮಾಂಜರಿ ಗ್ರಾಮದ ಸಂಪರ್ಕ ರಸ್ತೆ ಕಾಮಗಾರಿಗೆ, ಶಿರಗುಪ್ಪಿ ಗ್ರಾಮದಲ್ಲಿ ಮಡಿವಾಳ ಮಾಚಿದೇವ, ಮರಗುಬಾಯಿ ದೇವಸ್ಥಾನದ ಸಮುದಾಯ ಭವನ ಹಾಗೂ ಚರಂಡಿ ಕಾಮಗಾರಿಗೆ ಮತ್ತು ಜುಗೂಳ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ, ಲೋಕುರ ಗ್ರಾಮದಲ್ಲಿ ಪೇವಿಂಗ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಜಿಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವೀರಣ್ಣ ವಾಲಿ, ಜೂಗೂಳ ಗ್ರಾಪಂ ಅಧ್ಯಕ್ಷ ಕಾಕಾ ಪಾಟೀಲ, ಮುಖಂಡರಾದ ಅಣ್ಣಾಸಾಹೇಬ ಪಾಟೀಲ, ಅನೀಲ ಕಡೋಲಿ, ರಾಜು ಕಡೋಲಿ, ಸುರೇಶ ಪಾಟೀಲ, ಬಿ.ಐ.ಪಾಟೀಲ, ರವೀಂದ್ರ ವ್ಹಾಂಟೆ, ಅಣ್ಣಾಸಾಹೇಬ ಪಾಟೀಲ, ಸಂತೋಷ ಪಾಟೀಲ, ಸಾಗರ ಚೌಗಲೆ, ಸೋಮರಾಜ ಪಾಟೀಲ, ವಿವೇಕ ಪಾಟೀಲ, ಸಿದಗೊಂಡ ಪಾಟೀಲ, ಅಡಿವೆಪ್ಪ ಉಳ್ಳಾಗಡ್ಡಿ, ಸಂತೋಷ ಶೇಗುಣಸಿ, ಶಂಕರ ಚೌವ್ಹಾಣ, ಮುತ್ತಪ್ಪಾ ಜಮಖಂಡಿ, ಚಿದು ಹಣಮಾಪುರೆ, ದಿಲೀಪ ಮಾದರ, ಪ್ರಕಾಶ ಕಾಂಬಳೆ ಸೇರಿದಂತೆ ಅನೇಕರು ಇದ್ದರು.;Resize=(128,128))