ಸಾರಾಂಶ
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯಳಂದೂರು ಪಿಎಸಿಸಿಎಸ್ ಅಧ್ಯಕ್ಷ ವೈ.ಬಿ.ಮಹೇಶ್, ತಾಲೂಕು ಭಗೀರಥ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಪಿ.ಮಾದೇಶ್ ಉಪ್ಪಾರ್ ಒತ್ತಾಯಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯಳಂದೂರು ಪಿಎಸಿಸಿಎಸ್ ಅಧ್ಯಕ್ಷ ವೈ.ಬಿ.ಮಹೇಶ್, ತಾಲೂಕು ಭಗೀರಥ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಪಿ.ಮಾದೇಶ್ ಉಪ್ಪಾರ್ ಒತ್ತಾಯಿಸಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,
ಶಾಸಕ ಪುಟ್ಟರಂಗಶೆಟ್ಟಿ ರಾಜ್ಯದ ಉಪ್ಪಾರ ಜನಾಂಗದ ಏಕೈಕ ಶಾಸಕರು. ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದಾರೆ. ಉಪ್ಪಾರ ಸಮಾಜ ಮತದಾರರು ಹೆಚ್ಚು ಇರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಜಾಗೃತಿ ಮೂಡಿಸಿದ್ದಾರೆ. 2008ರಿಂದ ನಿರಂತರ ಆಯ್ಕೆಯಾಗಿದ್ದಾರೆ. ಜಿಲ್ಲಾ ಕೇಂದ್ರದ ಅಭಿವೃದ್ಧಿ ಗಾಗಿ ಶ್ರಮಿಸಿದ್ದಾರೆ ಎಂದರು.ಸಿ.ಪುಟ್ಟರಂಗಶೆಟ್ಟಿ ಕಾಂಗ್ರೆಸ್ ಪಕ್ಷದಿಂದಲ್ಲೇ ರಾಜಕೀಯ ಆರಂಭಿಸಿದರು. ಅಧಿಕಾರ ಇರಲಿ, ಇಲ್ಲದಿದ್ದ ಸಂದರ್ಭದಲ್ಲೂ ಕಾಂಗ್ರೆಸ್ ಬಿಟ್ಟು ಹೋಗಿಲ್ಲ. ಅವರಿಗೆ ಬೇರೆ ಪಕ್ಷಗಳಿಂದಲ್ಲೂ ಅಫರ್ ಬಂದರು ಕೂಡ ಪಕ್ಷಾಂತರ ಮಾಡದೆ ಕಾಂಗ್ರೆಸ್ ನಲ್ಲಿ ನಿಷ್ಠಾವಂತರಾಗಿದ್ದು ಪಕ್ಷ ಬೆಳೆಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟ ಅಭಿಮಾನಿಯಾಗಿರುವ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಹಾಪ್ ಕಾಮ್ಸ್ ನಿರ್ದೇಶಕ ಬಸವಶೆಟ್ಟಿ, ರಂಗಸ್ವಾಮಿ ಮದ್ದೂರು, ಮಹದೇವಶೆಟ್ಟಿ ಕಂದಹಳ್ಳಿ, ಗ್ರಾ.ಪಂ.ಮಾಜಿ ಸದಸ್ಯ ಮಾದೇಶ್ ಹಾಜರಿದ್ದರು.