ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿ- ಇಒ ರಾಮರಡ್ಡಿ ಪಾಟೀಲ

| Published : Jun 04 2024, 12:30 AM IST

ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿ- ಇಒ ರಾಮರಡ್ಡಿ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರದಲ್ಲಿ ಇಒ ರಾಮರಡ್ಡಿ ಪಾಟೀಲ ಸಲಹೆ ನೀಡಿ ಆರೋಗ್ಯಕ್ಕೆ ಒತ್ತು ನೀಡುವಂತೆ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೂಲಿ ಕಾರ್ಮಿಕರು ಕೆಲಸದ ಜತೆಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಎಂದು ಬೆಳಗಾವಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮರಡ್ಡಿ ಪಾಟೀಲ ಹೇಳಿದರು.

ತಾಲ್ಲೂಕ ಪಂಚಾಯತ ಬೆಳಗಾವಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಶಿವಾಪೂರ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರಿಗೆ ಕುಟುಂಬದ ಜವಾಬ್ದಾರಿ ಮತ್ತು ಆರ್ಥಿಕ ತೊಂದರೆ ಇರುವುದರಿಂದ ಆರೋಗ್ಯದ ಕಡೆ ಗಮನಹರಿಸುವುದಿಲ್ಲ. ಇದರಿಂದಾಗಿ ತಮ್ಮ ಆರೋಗ್ಯಕ್ಕೆ ತೊಂದರೆಯಾಗಿ ದುಡಿಮೆ ಇಲ್ಲದಂತಾಗಿ ಮತ್ತಷ್ಟು ತೊಂದರೆಗೆ ಒಳಗಾಗುವ ಸಂಭವ ಇರುತ್ತದೆ. ಸಮಯಕ್ಕೆ ಸರಿಯಾಗಿ ಊಟೋಪಚಾರ ಮಾಡಿಕೊಂಡು ಉತ್ತಮ ಆರೋಗ್ಯವಂತರಾಗಿ ಬಾಳಬೇಕು ಎಂದು ತಿಳಿಸಿದರು.

ಕೂಲಿಕಾರರು ತಮ್ಮ ಜಮೀನಿನಲ್ಲಿ ಕೃಷಿಹೊಂಡ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬಹುದು. ಜತೆಗೆ ಜಾನುವಾರು, ಮೇಕೆಗಳು ಇದ್ದರೇ ದನದದೊಡ್ಡಿ, ಕುರಿದೊಡ್ಡಿ ಸಹ ನಿರ್ಮಿಸಿಕೊಳ್ಳಲು ಈ ಯೋಜನೆಯಲ್ಲಿ ಅವಕಾಶವಿದೆ. ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ ವೈಯಕ್ತಿಕ ಕಾಮಗಾರಿಗಳ ಸದುಪಯೋಗ ಪಡೆದುಕೊಳ್ಳಬಹುದು. ಕೂಲಿಕಾರರು ವೈಯಕ್ತಿಕ ಬ್ಯಾಂಕ್ ಖಾತೆ ಹೊಂದಿದ್ದರೇ ಮಾತ್ರ ಸಕಾಲದಲ್ಲಿ ಕೆಲಸ ನೀಡಲು ಮತ್ತು ಕೂಲಿ ಪಾವತಿಸಲು ಸಾಧ್ಯ. ಉದ್ಯೋಗ ಚೀಟಿಯಲ್ಲಿರುವ ಕೂಲಿಕಾರರು ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಿಸಬೇಕು ಎಂದರು.

ಈ ವೇಳೆ ನರೇಗಾ ಕೂಲಿಕಾರ್ಮಿಕರಿಗೆ ಆರೋಗ್ಯ ಇಲಾಖೆಯಿಂದ ವಿವಿಧ ತಪಾಸಣೆ ಮಾಡಲಾಯಿತು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಪತ್ತಾರ, ಕಾರ್ಯದರ್ಶಿ ಹರಿಹರ ಬಡಿಗೇರ, ಐಇಸಿ ಸಂಯೋಜಕ ರಮೇಶ ಮಾದರ ಗ್ರಾಮ ಪಂಚಾಯತಿ ಮತ್ತು ವೈಧ್ಯಕೀಯ ಸಿಬ್ಬಂದಿ ಇದ್ದರು.