ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಡಿ.8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ಸಭಾಧ್ಯಕ್ಷ ಯು.ಟಿ.ಖಾದರ್‌ಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರ ಬರೆದಿದ್ದಾರೆ.ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯ ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಬಾರಿ ಅಧಿವೇಶನ ಜರುಗಿದಾಗ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಅಧಿವೇಶನದ ಕೊನೆಯ ದಿನಗಳಲ್ಲಿ ಚರ್ಚೆಗೆ ಅವಕಾಶ ನೀಡುತ್ತಿರುವುದರಿಂದ ಕೊನೆಯ ದಿನಗಳಲ್ಲಿ ಶಾಸಕರು, ಸಚಿವರ ಹಾಜರಾತಿ ಕಡಿಮೆಯಾಗಿ ಚರ್ಚೆಯೇ ನಡೆಯುವುದಿಲ್ಲ. ಕಾರಣ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದೇ ಡಿ.8 ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನನದಲ್ಲಿ ಉತ್ತರ ಕರ್ನಾಟಕ ಭಾಗದ ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ಇನ್ನಿತರೆ ನೀರಾವರಿ ಯೋಜನೆಗಳ ಅನುಷ್ಠಾನ, ನೀರಾವರಿ ಯೋಜನೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ಭೂ ಪರಿಹಾರ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ, ಉದ್ಯೋಗ ಸೃಷ್ಟಿಗಾಗಿ ಕೈಗಾರಿಕೆಗಳ ಸ್ಥಾಪನೆ, ತ್ವರಿತಗತಿಯಲ್ಲಿ ಕೆಲಸವಾಗಲು ಮುಖ್ಯ ಕಚೇರಿಗಳ ಸ್ಥಾಪನೆ, ಶಿಥಿಲಾವಸ್ಥೆಯಲ್ಲಿರುವ ಕನ್ನಡ ಶಾಲೆಗಳ ಪುನರ್ ನಿರ್ಮಾಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ, ವಿವಿಧ ಇಲಾಖೆಗಳಲ್ಲಿ ಖಾಲಿವಿರುವ ಹುದ್ದೆಗಳ ನೇಮಕಾತಿ, ತೋಟಗಾರಿಕಾ ಹಾಗೂ ಕೃಷಿ ಬೆಳೆಗಳಿಗೆ ಉತ್ತೇಜನ, ಕಬ್ಬು ಬೆಳೆಗಾರರ ಸಮಸ್ಯೆಗಳು ಹೀಗೆ ಜ್ವಲಂತ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಚಳಿಗಾಲ ಅಧಿವೇಶನದ ಮೊದಲ ಅವಧಿಯಲ್ಲಿಯೇ ಹೆಚ್ಚಿನ ಸಮಯಾವಕಾಶ ಕಲ್ಪಿಸಲು ಉತ್ತರ ಕರ್ನಾಟಕ ಭಾಗದ ಜನರ ಪರವಾಗಿ ವಿನಂತಿಸಿದ್ದಾರೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
;Resize=(128,128))
;Resize=(128,128))
;Resize=(128,128))
;Resize=(128,128))