ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಿ: ಡಾ. ಶಿವಮೂರ್ತಿ

| Published : Jul 15 2024, 01:54 AM IST

ಸಾರಾಂಶ

ಚಿಕ್ಕಮಗಳೂರು, ಮಕ್ಕಳ ಸರ್ವಾಂಗೀಣ ಬೆಳವಣಿಗೆ ಮತ್ತು ಆರೋಗ್ಯಕ್ಕಾಗಿ ಪೋಷಕರು ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರಗಳನ್ನೇ ನೀಡಬೇಕು ಎಂದು ಮಕ್ಕಳ ತಜ್ಞ ಡಾ. ಶಿವಮೂರ್ತಿ ಸಲಹೆ ಮಾಡಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಕ್ಕಳ ಸರ್ವಾಂಗೀಣ ಬೆಳವಣಿಗೆ ಮತ್ತು ಆರೋಗ್ಯಕ್ಕಾಗಿ ಪೋಷಕರು ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರಗಳನ್ನೇ ನೀಡಬೇಕು ಎಂದು ಮಕ್ಕಳ ತಜ್ಞ ಡಾ. ಶಿವಮೂರ್ತಿ ಸಲಹೆ ಮಾಡಿದರು.ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ’ಪೌಷ್ಟಿಕಾಂಶ ದಿನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪೌಷ್ಟಿಕಾಂಶಯುಕ್ತ ಆಹಾರಗಳು ಮನುಷ್ಯನ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಪೌಷ್ಟಿಕಾಂಶಯುಕ್ತ ಆಹಾರ ಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ನಿರೋಗಿಯಾಗಬಹುದು, ಮಾನಸಿಕ ಮತ್ತು ದೈಹಿಕವಾಗಿ ಸದೃಢ ರಾಗಬಹುದು ಎಂದು ಕಿವಿಮಾತು ಹೇಳಿದರು.ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ಧಾನ್ಯಗಳು, ಹಣ್ಣು, ತರಕಾರಿಗಳು ಅತ್ಯಗತ್ಯ, ಅವುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಟಿಕಾಂಶವಿರುತ್ತದೆ. ಹಾಗಾಗಿ ಅವುಗಳನ್ನು ಸೇವಿಸಿದರೆ ಮಕ್ಕಳು ಸದೃಢರಾಗುತ್ತಾರೆ ಎಂದು ತಿಳಿಸಿದರು.ಖಾಸಗೀ ಶಾಲೆಯಲ್ಲಿ ಪೌಷ್ಟಿಕಾಂಶ ದಿನ ಆಚರಿಸುತ್ತಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದ ಅವರು, ಮಕ್ಕಳ ಹಿತದೃಷ್ಟಿಯಿಂದ ಎಲ್ಲಾ ಶಾಲೆಗಳಲ್ಲೂ ಇಂತಹ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಜೀವಿನಿ ವಿದ್ಯಾಸಂಸ್ಥೆ ಅಧ್ಯಕ್ಷೆ ಎಸ್. ಶಾಂತಕುಮಾರಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ತಮ್ಮ ಶಾಲೆ ಎಲ್ಲಾ ರೀತಿ ಪ್ರಯತ್ನ ಮಾಡುತ್ತಿದೆ ಎಂದರು.ಮಕ್ಕಳು ನಿರೋಗಿಗಳಾಗಿ ಬಾಳಬೇಕಾದರೆ ಅವರಿಗೆ ಕಡ್ಡಾಯವಾಗಿ ಪೌಷ್ಟಿಕಾಂಶಯುಕ್ತ ಆಹಾರಗಳನ್ನೇ ನೀಡಬೇಕು ಎಂದು ಪೋಷಕರಿಗೆ ಮನವಿ ಮಾಡಿದರು.ಇದೇ ವೇಳೆ ಸಂಸ್ಥೆಯಲ್ಲಿ ಪೌಷ್ಟಿಕಾಂಶಯುಕ್ತ ಆಹಾರಗಳ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ನಡೆಯಿತು. ಪ್ರಾಂಶುಪಾಲರಾದ ಎಚ್.ಆರ್. ಹೇಮಾ, ಶಿಕ್ಷಕಿಯರಾದ ಸವಿತಾ, ವರ್ಷಾ, ಹೀರಾ ಉಪಸ್ಥಿತರಿದ್ದರು.