ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಪಾನೆಗೆ ಹಾಗೂ ಕನ್ನಡ ಬಾವುಟ ಹಾರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ) ಮತ್ತು ಕರವೇ ಕನ್ನಡ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಪಾನೆಗೆ ಹಾಗೂ ಕನ್ನಡ ಬಾವುಟ ಹಾರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ) ಮತ್ತು ಕರವೇ ಕನ್ನಡ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕನ್ನಡ ಬಾವುಟ ಹಾರಿಸಲು ಅನುಮತಿ ನೀಡದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉಚಗಾಂವ ಗ್ರಾಮದಲ್ಲಿ ಕನ್ನಡ ಬಾವುಟ ಹಾರಿಸಲು ಕಳೆದ ಎರಡು ವರ್ಷಗಳಿಂದ ಮನವಿ ಮಾಡುತ್ತ ಬಂದಿದ್ದರೂ ಪೊಲೀಸರು ಅನುಮತಿ ನೀಡುತ್ತಿಲ್ಲ. ನಾವೇ ಉಚಗಾಂವ ಗ್ರಾಮಕ್ಕೆ ತೆರಳಿ, ಕನ್ನಡ ಬಾವುಟ ಹಾರಿಸುತ್ತೇವೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದವೂ ನಡೆಯಿತು. ಕರವೇ ಕನ್ನಡ ಸೇನೆ ರಾಜ್ಯಾಧ್ಯಕ್ಷ ಅನಿಲಕುಮಾರ, ಅನಿಲ ದಡ್ಡಿಮನಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.