ಸಾರಾಂಶ
ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ನೂತನ ರಾಜ್ಯ ಸಚಿವ ವಿ. ಸೋಮಣ್ಣ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮೊದಲ ಬಾರಿಗೆ ನಗರದ ಕೆರೆಗೋಡಿ-ರಂಗಾಪುರ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡರು.
ಕನ್ನಡಪ್ರಭ ವಾರ್ತೆ ತಿಪಟೂರು
ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ನೂತನ ರಾಜ್ಯ ಸಚಿವ ವಿ. ಸೋಮಣ್ಣ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮೊದಲ ಬಾರಿಗೆ ನಗರದ ಕೆರೆಗೋಡಿ-ರಂಗಾಪುರ ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡರು.ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಇಲ್ಲಿನ ರೈತರ ಪ್ರಮುಖ ವಾಣಿಜ್ಯ ಬೆಳೆಯಾದ ಕೊಬ್ಬರಿ ದರ ತುಂಬಾ ಕುಸಿಯುತ್ತಿದ್ದು, ಕೇಂದ್ರ ಸರ್ಕಾರ ಕೊಬ್ಬರಿ ಬೆಂಬಲ ಬೆಲೆಯನ್ನು ಮತ್ತಷ್ಟು ಹೆಚ್ಚಿಸಿ, ರೈತರು ಬೆಳೆದಿರುವ ಎಲ್ಲ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವ ಬಗ್ಗೆ ಗಮನ ಹರಿಸಬೇಕಾಗಿದೆ. ಜಲಶಕ್ತಿ ಹಾಗೂ ರೈಲ್ವೆ ಇಲಾಖೆಗಳಿಂದ ಕಲ್ಪತರು ನಾಡಿಗೆ ಆಗಬೇಕಾಗಿರುವ ಎಲ್ಲ ಕೆಲಸ ಕಾರ್ಯಗಳನ್ನು ಒದಗಿಸುವ ಕಡೆ ಹೆಚ್ಚಿನ ಗಮನ ಹರಿಸಬೇಕು. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು. ಜನರ ನಿರೀಕ್ಷೆ ಮೀರಿ ಉತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುವಂತೆ ಶ್ರೀಗಳು ಆಶೀರ್ವದಿಸಿದರು.ಮಾಜಿ ಸಂಸದ ಜಿ. ಎಸ್. ಬಸವರಾಜು, ಶಾಸಕ ಜ್ಯೋತಿಗಣೇಶ್, ಮಾಜಿ ಶಾಸಕ ಸೊಗಡು ಶಿವಣ್ಣ, ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್, ನಿವೃತ್ತ ಪ್ರಾಂಶುಪಾಲರಾದ ಶಂಕರಪ್ಪ, ಜಕ್ಕನಹಳ್ಳಿ ಲಿಂಗರಾಜು ಇತರರು ಇದ್ದರು.