ಸಾರಾಂಶ
ಇಂದಿನ ತಂತ್ರಜ್ಞಾನ ಯುಗದಲ್ಲಿ ಎಲ್ಲ ಕೆಲಸ ಕಾರ್ಯಗಳು ಕಂಪ್ಯೂಟರ್ ಮೂಲಕವೇ ನಡೆಯುತ್ತಿವೆ. ಆದ್ದರಿಂದ ಕಂಪ್ಯೂಟರ್ ಶಿಕ್ಷಣ ಗ್ರಾಮೀಣ ಮಕ್ಕಳಿಗೂ ಅಗತ್ಯವಾಗಿದೆ ಎಂದು ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೆದಾರ ಹೇಳಿದರು.
ಕನ್ನಡಪ್ರಭ ವಾರ್ತೆ ಕಮತಗಿ
ಇಂದಿನ ತಂತ್ರಜ್ಞಾನ ಯುಗದಲ್ಲಿ ಎಲ್ಲ ಕೆಲಸ ಕಾರ್ಯಗಳು ಕಂಪ್ಯೂಟರ್ ಮೂಲಕವೇ ನಡೆಯುತ್ತಿವೆ. ಆದ್ದರಿಂದ ಕಂಪ್ಯೂಟರ್ ಶಿಕ್ಷಣ ಗ್ರಾಮೀಣ ಮಕ್ಕಳಿಗೂ ಅಗತ್ಯವಾಗಿದೆ ಎಂದು ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೆದಾರ ಹೇಳಿದರು.ಸಮೀಪದ ಮೂಗನೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರಿನ ಶ್ರೀ ಸತ್ಯಸೀತ ಎಜುಕೇಷನ್ ಯಾಂಡ್ ಚಾರಿಟೇಬಲ್ ಟ್ರಸ್ಟ್‌ನವರು ಶಾಲೆಗೆ ಉಚಿತವಾಗಿ 10 ಕಂಪ್ಯೂಟರ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಬಡ ಮಕ್ಕಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಬಾರದೆಂದು ಬೆಂಗಳೂರಿನ ಶ್ರೀ ಸತ್ಯಸೀತ ಎಜುಕೇಷನ್ ಯಾಂಡ್ ಚಾರಿಟೇಬಲ್ ಟ್ರಸ್ಟ್‌ನವರು ಶಾಲೆಗೆ 10 ಕಂಪ್ಯೂಟರಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಶಾಲೆಯ ಮಕ್ಕಳು ಕಂಪ್ಯೂಟರ್ ಶಿಕ್ಷಣವನ್ನು ಪಡೆಯುವುದಕ್ಕೆ ಬಹಳಷ್ಟು ಸಹಕಾರಿಯಾಗಿದೆ. ಇದರಿಂದ ಸರಕಾರಿ ಶಾಲೆಗಳ ಗುಣಮಟ್ಟದ ಶಿಕ್ಷಣಕ್ಕೆ ಈ ಸೇವಾ ಸಂಸ್ಥೆಯು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿರುವ ಕಾರ್ಯ ಶ್ಲಾಘನೀಯ ವಿಷಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಸತ್ಯಸೀತ ಎಜುಕೇಷನ್ ಯಾಂಡ್ ಚಾರಿಟೇಬಲ್ ಟ್ರಸ್ಟ್‌ನ ಪದಾಧಿಕಾರಿಗಳು, ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ನಾಗಬಸಯ್ಯ ಸರಗಣಾಚಾರಿ, ಮೂಗನೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗಮ್ಮ ಕೂಗನ್ನವರ, ಪಿಕೆಪಿಎಸ್ ಅಧ್ಯಕ್ಷ ಸಂಗಮೇಶ ಹಾವಳಗಿ, ಪಿಡಿಒ ಪಿ ಬಿ ಮುಳ್ಳೂರ,ಶಾಲೆಯ ಮುಖ್ಯಗುರು ಎಂ.ಜಿ.ಗೌಡರ, ಗ್ರಾಪಂ ಸದಸ್ಯರು, ಪಿಕೆಪಿಎಸ್ ಸದಸ್ಯರು, ಎಸ್‌ಡಿಎಮ್‌ಸಿ ಸದಸ್ಯರು, ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಮೀಪದ ಮೂಗನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಶ್ರೀ ಸತ್ಯಸೀತ ಎಜುಕೇಷನ್ ಯಾಂಡ್ ಚಾರಿಟೇಬಲ್ ಟ್ರಸ್ಟ್‌ನವರು ಉಚಿತವಾಗಿ 10 ಕಂಪ್ಯೂಟರಗಳನ್ನು ನೀಡಿದಕ್ಕೆ ಶಾಲೆಯ ವತಿಯಿಂದ ಸಂಸ್ಥೆಯ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದರು.