ಅಭಿವೃದ್ಧಿಗೆ ಆದ್ಯತೆ ನೀಡಿ: ಭಂಡಾರಿ ಶ್ರೀನಿವಾಸ್

| Published : Dec 08 2024, 01:18 AM IST

ಅಭಿವೃದ್ಧಿಗೆ ಆದ್ಯತೆ ನೀಡಿ: ಭಂಡಾರಿ ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ರಾಜಕೀಯವನ್ನು ಚುನಾವಣೆಗೆ ಮಾತ್ರ ಸೀಮಿತ ಮಾಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಪುರ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷ ಅಶೋಕ್‌ ಗೆ ಅಭಿನಂದನೆ

ಕನ್ನಡಪ್ರಭ ವಾರ್ತೆ, ಕಡೂರು

ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ರಾಜಕೀಯವನ್ನು ಚುನಾವಣೆಗೆ ಮಾತ್ರ ಸೀಮಿತ ಮಾಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ತಾಲೂಕಿನ ಪುರ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಗೆ ಅಭಿನಂದಿಸಿ ಮಾತನಾಡಿ, ಜನರು ಚುನಾವಣೆ ಮೂಲಕ ಗ್ರಾಪಂ ಸದಸ್ಯರಾಗಿ ಆಯ್ಕೆ ಮಾಡಿ ಕಳಿಸಿದಾಗ ಅವರ ಜವಾಬ್ದಾರಿ ಹೆಚ್ಚಿರುತ್ತದೆ. ಜನತಂತ್ರ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯ. ಜನಪ್ರತಿನಿಧಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಆಧ್ಯತೆ ನೀಡಿ ಕೆಲಸ ಮಾಡಲಿ ಎಂದರು.

ಅಭಿವೃದ್ಧಿಯೇ ಬೇರೆ ರಾಜಕೀಯವೇ ಬೇರೆ. ಕುಡಿವ ನೀರು, ರಸ್ತೆ, ಬೀದಿದೀಪ ಸೇರಿದಂತೆ ಸರ್ಕಾರದ ಸವಲತ್ತುಗಳು ಜನರಿಗೆ ತಲುಪುವಂತೆ ನೂತನ ಉಪಾಧ್ಯಕ್ಷ ಅಶೋಕ್‌, ಅಧ್ಯಕ್ಷರು ಮತ್ತು ಸದಸ್ಯರ ಸಹಕಾರದಿಂದ ಕೆಲಸ ನಿರ್ವಹಿಸಲಿ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಹಾಗು ಗ್ರಾಪಂ ಮಾಜಿ ಅಧ್ಯಕ್ಷ ಕಂಸಾಗರ ರೇವಣ್ಣ ಮಾತನಾಡಿ, ಸಾಧ್ಯವಾದಷ್ಟು ಗ್ರಾಪಂ ಸದಸ್ಯರು ತಮ್ಮ ವ್ಯಾಪ್ತಿಯ ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಿ ಶ್ರಮವಹಿಸಿದಲ್ಲಿ ಜನರ ಪ್ರೀತಿಗೆ ಪಾತ್ರರಾಗುವ ಜೊತೆಗೆ ಮರು ಆಯ್ಕೆ ಆಗುವುರಲ್ಲಿ ಸಂದೇಹವಿಲ್ಲ ಎಂದರು.

ಕಾರ್ಯಕ್ರಮಕ್ಕೂ ಮುನ್ನ ನಡೆದ ಚುನಾವಣೆಯಲ್ಲಿ ಅಭ್ಯರ್ಥಿ ಮನು ಕುಮಾರ್ 2 ಮತ ಪಡೆದರೆ, ಅಶೋಕ್ 8 ಮತ ಪಡೆದು ಆಯ್ಕೆಯಾದರೆಂದು ಚುನಾವಣಾಧಿಕಾರಿ ಜಯದೇವ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಫಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಡಿ.ಎಸ್. ಉಮೇಶ್, ಕಾಂಗ್ರೆಸ್ ಮುಖಂಡರಾದ ಗೋವಿಂದಪ್ಪ , ಯರದಕೆರೆ ಎಂ.ರಾಜಪ್ಪ, ತಾಪಂ ಮಾಜಿ ಅಧ್ಯಕ್ಷೆ ರೇಣುಕಾ ಉಮೇಶ್, ಕೊನೆಮನೆ ರವಿ. ಮಂಜಪ್ಪ, ಡಿ.ಟಿ.ಕುಮಾರ್, ಶಕುಂತಲಾ ರವಿ . ನಾಗಮ್ಮ ಶಿವು, ಈಶ್ವರಪ್ಪ ಮತ್ತಿತರರು ಇದ್ದರು.

6ಕೆಕೆಡಿಯು2.

ಪುರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಅವರನ್ನು ಅಭಿನಂದಿಸಲಾಯಿತು. ಕಡೂರು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಮತ್ತಿತರರು ಇದ್ದರು.