ಸರ್ಕಾರದ, ಜಿಲ್ಲಾಡಳಿತದ ಕಾರ್ಯಕ್ರಮಗಳಲ್ಲಿ ವಿಕಲಚೇತನರು ಭಾಗವಹಿಸಲು ಅಗತ್ಯ ವ್ಯವಸ್ಥೆ ಮಾಡಿ,

ಕನ್ನಡಪ್ರಭ ವಾರ್ತೆ, ತುಮಕೂರುಸರ್ಕಾರದ, ಜಿಲ್ಲಾಡಳಿತದ ಕಾರ್ಯಕ್ರಮಗಳಲ್ಲಿ ವಿಕಲಚೇತನರು ಭಾಗವಹಿಸಲು ಅಗತ್ಯ ವ್ಯವಸ್ಥೆ ಮಾಡಿ, ವಿಕಲಚೇತನರೂ ಸಮಾಜವಾಗಿ, ಗೌರವಯುತವಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲು ಕೋರಿ ಪ್ರೇರಣಾ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್ ನಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನೂರುನ್ನೀಸಾ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಟ್ರಸ್ಟ್ ಕಾರ್ಯದರ್ಶಿ ಎಸ್.ಬಾಬು, ಜಿಲ್ಲಾಡಳಿತದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲೂ ವಿಕಲಚೇತನಸ್ನೇಹಿ ಮಾನದಂಡಗಳನ್ನು ಕಡ್ಡಾಯವಾಗಿ ಅನುಸರಿಸಬೇಕು, ಸಭಾಂಗಣ, ವೇದಿಕೆ, ಪ್ರವೇಶ-ನಿರ್ಗಮನ, ಶೌಚಾಲಯಗಳಲ್ಲಿ ರ್ಯಾಂಪ್‌, ಹ್ಯಾಂಡ್ರೆಲ್, ಲಿಫ್ಟ್ ವ್ಯವಸ್ಥೆ ಮಾಡಬೇಕು, ವಿಶ್ವ ಅಂಗವಿಕಲರ ದಿನಾಚರಣೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಲ್ಲೂ ೨೧ ವಿಧದ ಅಂಗವೈಕಲ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿಕಲಚೇತನರ ಭಾಗವಹಿಸುವಿಕೆಗೆ ಅಗತ್ಯ ವ್ಯವಸ್ಥೆ ಮಾಡಬೇಕು. ವಿಕಲಚೇತನರು ವೇದಿಕೆ ಹತ್ತಲು ಶಾಶ್ವತ ಅಥವಾ ತಾತ್ಕಾಲಿಕ ರ್ಯಾಂ ಪ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು. ವಿವಿಧ ಅನುಕೂಲಗಳಿಲ್ಲದೆ ಸರ್ಕಾರದ ಕಾರ್ಯಕ್ರಮಗಳಲ್ಲಿ ವಿಕಲಚೇತನರು ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಕಾರ್ಯಕ್ರಮಗಳಲ್ಲಿ ವ್ಹೀಲ್ ಚೇರ್ ಬಳಸುವವರಿಗೆ ರ್ಯಾಂ ಪ್, ದೃಷ್ಟಿಹೀನರಿಗೆ ಸೂಕ್ತ ಮಾರ್ಗಸೂಚಿ ಹಾಗೂ ಸಹಾಯ ವ್ಯವಸ್ಥೆ ಕಲ್ಪಿಸಬೇಕು, ಸೂಕ್ತ ಶೌಚಾಲಯ ವ್ಯವಸ್ಥೆ ಮಾಡಿ ವಿಕಲಚೇತನರೂ ಭಾಗವಹಿಸಲು ಅನುಕೂಲ ಮಾಡಿಕೊಡಬೇಕು ಎಂದು ಎಸ್.ಬಾಬು ಮನವಿ ಮಾಡಿದರು.