ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ : ಆರ್‌. ಚೆನ್ನಬಸ್ಸು

| Published : Feb 06 2025, 12:15 AM IST

ಸಾರಾಂಶ

Give quality education to children: R. Nice bus

-ಕೃಷ್ಣಾ ಆಂಗ್ಲ ಮಾಧ್ಯಮ ಶಾಲೆಯ 40ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟನೆ

---ಕನ್ನಡಪ್ರಭ ವಾರ್ತೆ ಶಹಾಪುರ

ಶಿಕ್ಷಣ ಸಂಸ್ಥೆಗಳು ನಿರಂತರವಾಗಿ ಅಧ್ಯಯನದ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್. ಚೆನ್ನಬಸ್ಸು ವನದುರ್ಗ ತಿಳಿಸಿದರು.

ತಾಲ್ಲೂಕಿನ ಭೀಮರಾಯನಗುಡಿ ಕೃಷ್ಣಾ ಆಂಗ್ಲ ಮಾಧ್ಯಮ ಶಾಲೆಯ 40ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತ, ಶಿಕ್ಷಣ ಜೊತೆಯಲ್ಲಿ ಮಕ್ಕಳಿಗೆ ನೈತಿಕ ಮೌಲ್ಯದ ಪಾಠವನ್ನು ಕಲಿಸಬೇಕು. ದೇಶಾಭಿಮಾನದ ಬಗ್ಗೆ ಸದಾ ಮಕ್ಕಳಲ್ಲಿ ಜಾಗೃತಿಯ ಅರಿವು ಮೂಡಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವುದರ ಜತೆಗೆ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದರು.

ತಾಲ್ಲೂಕಿನಲ್ಲಿ ಹೆಚ್ಚಾಗಿ ಯಾವುದೇ ಪರವಾನಿಗೆ ಪಡೆದುಕೊಳ್ಳದೆ ಕೋಚಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಇದರ ಬಗ್ಗೆ ನಾವು ಹೋರಾಟ ನಡೆಸಿದ್ದೇವೆ. ಸರ್ಕಾರಿ ಶಾಲೆಯಲ್ಲಿ ನೋಂದಣಿ ಮಾಡಿಸಿ ಅನಧಿಕೃತ ತರಬೇತಿ ಕೇಂದ್ರದಲ್ಲಿ ಅಭ್ಯಾಸ ಮಾಡಲು ಬಿಡುತ್ತಿರುವುದು ಸರಿಯಲ್ಲ. ಪಾಲಕರು ಇದರ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಸಂಸ್ಥೆಯ ಮುಖ್ಯಸ್ಥ ಅರವಿಂದ ಮುಡಬೂಳ ಮಾತನಾಡಿ, ನಮ್ಮ ಸಂಸ್ಥೆಯು 40 ವರ್ಷಗಳಿಂದ ಸಾಕಷ್ಟು ತೊಂದರೆ ನಡುವೆ ಮುನ್ನೆಡಿಸಿಕೊಂಡು ಬಂದಿದ್ದು, ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆಗೆ ನಾವು ಹೆಚ್ಚು ಒತ್ತು ನೀಡಿದ್ದೇವೆ ಎಂದರು.

ಮುಡಬೂಳ ಸದ್ಗುರು ರಂಗಲಿಂಗೇಶ್ವರ ಮಠದ ಪೀಠಾಧಿಪತಿ ತ್ರಿಶೂಲ ಹವಾಲ್ದಾರ, ಸಂಸ್ಥೆಯ ಆಡಳಿತಾಧಿಕಾರಿ ಗುರುಲಿಂಗಯ್ಯ ಹಿರೇಮಠ, ವಕೀಲರಾದ ಉಮೇಶ ಮುಡಬೂಳ, ಎಎಸ್ಐ ಈಶ್ವರಪ್ಪ ಭಾಗವಹಿಸಿದ್ದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

-

5ವೈಡಿಆರ್‌4 : ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಕೃಷ್ಣಾ ಆಂಗ್ಲ ಮಾಧ್ಯಮ ಶಾಲೆಯ 40ನೇ ಶಾಲಾ ವಾರ್ಷಿಕೋತ್ಸವವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್. ಚೆನ್ನಬಸ್ಸು ವನದುರ್ಗ ಉದ್ಗಾಟಿಸಿದರು. ಶಾಲೆಯ ಮುಖ್ಯಸ್ಥ ಅರವಿಂದ ಮುಡಬೂಳ ಉಪಸ್ಥಿತರಿದ್ದರು.