ಅಂಜಲಿ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ

| Published : May 18 2024, 12:31 AM IST

ಅಂಜಲಿ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಹತ್ಯೆಯಾಗಿರುವ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು

ಗದಗ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ಗದಗ ಜಿಲ್ಲಾ ಅಂಬಿಗರ ಸಮಾಜ ಬಾಂಧವರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹಾದಿಮನಿ ಮಾತನಾಡಿ, ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಅಂಬಿಗೇರ ಸಮಾಜದ ಯುವತಿಯ ಕೊಲೆ ನಡೆದಿದೆ, ಹುಬ್ಬಳ್ಳಿ ನಗರದ ವೀರಾಪುರ ಓಣಿ ಗುಡಿ ಓಣಿ ನಿವಾಸಿ ಅಂಜಲಿಯನ್ನು ಅದೇ ಏರಿಯಾದ ವಿಶ್ವನಾಥ ಎಂಬ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ, ಈ ಕೃತ್ಯದಿಂದ ಇಡೀ ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ, ಅಷ್ಟೇ ಅಲ್ಲದೆ ತಂದೆ ತಾಯಿ ಕಳೆದುಕೊಂಡಿದ್ದ ಅಂಜಲಿ ತನ್ನ ಅಜ್ಜಿಯ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಳು, ಅಂಜಲಿಗೆ ಇಬ್ಬರು ಸಹೋದರಿಯರು ಇದ್ದು ಅಂಜಲಿಯೇ ಕುಟುಂಬ ನಡೆಸುತ್ತಿದ್ದಳು, ಅವಳ ಹತ್ಯೆಯಿಂದ ಕುಟುಂಬ ಬೀದಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ, ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಹತ್ಯೆಯಾಗಿರುವ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಾಜದ ಸಂಘಟನಾ ಕಾರ್ಯದರ್ಶಿ ಅಮಿತ್ ಪೂಜಾರ್, ಗುರಪ್ಪ ತಿರ್ಲಾಪುರ್, ಬಸವರಾಜ್ ಗುಡಿಸಾಗರ, ಮಹದೇವ ಬಾಣದ್, ಮಂಜು ಅಂಬಿಗೇರ, ಹರೀಶ್ ಬಾರಕೇರ್, ರಮೇಶ್ ಬೆಣಕಲ್, ಬೆಣಕಲ್ ಸೇರಿದಂತೆ ಸಮಾಜದ ಮುಖಂಡರು ಇದ್ದರು.