ಅಂಜಲಿ ಹತ್ಯೆಗೈದ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಿ; ಜಿಲ್ಲಾ ಗಂಗಾಮತ, ಮೊಗವೀರರ ಸಂಘ ಆಗ್ರಹ

| Published : May 19 2024, 01:46 AM IST

ಅಂಜಲಿ ಹತ್ಯೆಗೈದ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಿ; ಜಿಲ್ಲಾ ಗಂಗಾಮತ, ಮೊಗವೀರರ ಸಂಘ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಅಂಜಲಿ ಅಂಬಿಗೇರ ಅವರು ಹುಬ್ಬಳ್ಳಿ ನಗರದ ವೀರಾಪುರ ಓಣಿಯವರು. ಅದೇ ಪ್ರದೇಶದ ವಿಶ್ವನಾಥ್ ಎಂಬ ಯುವಕ ಅಂಜಲಿಯನ್ನು ಚಾಕುವಿನಿಂದ ಬರ್ಬರವಾಗಿ ಚುಚ್ಚಿ ಹತ್ಯೆ ಮಾಡಿದ್ದಾನೆ. ಇದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹತ್ಯೆ ಮಾಡಿದ ಪಾಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಶನಿವಾರ ಜಿಲ್ಲಾ ಗಂಗಾಮತ ಸಂಘ ಮತ್ತು ಮೊಗವೀರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಅಂಜಲಿ ಅಂಬಿಗೇರ ಅವರು ಹುಬ್ಬಳ್ಳಿ ನಗರದ ವೀರಾಪುರ ಓಣಿಯವರು. ಅದೇ ಪ್ರದೇಶದ ವಿಶ್ವನಾಥ್ ಎಂಬ ಯುವಕ ಅಂಜಲಿಯನ್ನು ಚಾಕುವಿನಿಂದ ಬರ್ಬರವಾಗಿ ಚುಚ್ಚಿ ಹತ್ಯೆ ಮಾಡಿದ್ದಾನೆ. ಇದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹತ್ಯೆ ಮಾಡಿದ ಪಾಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ಸರ್ಕಾರ ಹತ್ಯೆಯಾದ ಯುವತಿಯ ಸಂತ್ರಸ್ತ ಕುಟುಂಬಕ್ಕೆ 50ಲಕ್ಷ ರು. ಪರಿಹಾರ ನೀಡಬೇಕು. ಆರೋಪಿಗೆ ಕಠಿಣ ಕಾನೂನು ಮೂಲಕ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಗಂಗಾಮತ ಸಂಘದ ಅಧ್ಯಕ್ಷ ಡಿ.ಬಿ.ಕೆಂಚಪ್ಪ, ಮೊಗವೀರ ಸಮಾಜದ ಜಿಲ್ಲಾಧ್ಯಕ್ಷ ಕೆ.ವಿ. ಅಣ್ಣಪ್ಪ, ಪ್ರಮುಖರಾದ ಎ. ಹಾಲೇಶಪ್ಪ, ಸೂಗೂರು ಶೇಖರಪ್ಪ, ಜಿ.ನಾಗಪ್ಪ, ಜಿ.ಕೆಂಚಪ್ಪ, ಎಸ್.ಬಿ. ಅಶೋಕ್ ಕುಮಾರ್, ಎಸ್.ಬಿ. ಸತೀಶ್ ಕುಮಾರ್, ಜನಾರ್ಧನ್, ಆರುಂಡಿ ಶ್ರೀನಿವಾಸಮೂರ್ತಿ, ಹೆಚ್.ಎಂ. ರಂಗನಾಥ್, ಹನುಮೇಶ್, ವಿರೂಪಾಕ್ಷಪ್ಪ, ಮೋಹನ್, ವಿಶ್ವನಾಥ್, ಹರೀಶ್, ನಾಗರಾಜ್, ನಟರಾಜ್, ಕುಮಾರ್ ಮತ್ತಿತರರಿದ್ದರು.

-----------------------

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಅಂಜಲಿ ಹತ್ಯೆ ಅತ್ಯಂತ ಕ್ರೂರವಾದುದು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಇಡೀ ರಾಜ್ಯಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳಾಗುತ್ತಿವೆ. ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ. ಈ ಹಿಂದೆ ಹುಬ್ಬಳ್ಳಿಯ ನೇಹಾ, ಮಡಿಕೇರಿಯ ಮೀನಾ, ಹತ್ಯೆಯಾಗಿತ್ತು. ಅದೇ ರೀತಿ ಈಗ ಅಂಜಲಿ ಕೊಲೆಯಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆಗಡುಕರಿಗೆ ಹೆದರಿಕೆ ಇಲ್ಲದಂತಾಗಿದೆ ಎಂದು ದೂರಿದರು.

ಈ ಪ್ರಕರಣದ ಬಗ್ಗೆ ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು. ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಶೀಘ್ರವೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಗಾಯತ್ರಿದೇವಿ ಮಲ್ಲಪ್ಪ, ಪ್ರಮುಖರಾದ ಮಂಗಳಾ ನಾಗೇಂದ್ರ, ಜ್ಯೋತಿ ರಘು, ಯಶೋದಾ, ರಶ್ಮಿ ಶ್ರೀನಿವಾಸ್, ಸುರೇಖಾ ಪಾಲಾಕ್ಷಪ್ಪ, ಸುಮಿತ್ರಾ ಇದ್ದರು.