‘ಎಚ್.ಐ.ವಿ ಸೋಂಕು ಹಾಗೂ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸುವುದು’ ಈ ವರ್ಷದ ಘೋಷವಾಕ್ಯವಾಗಿದೆ. ಅಡೆತಡೆಗಳನ್ನು ನಿಯಂತ್ರಿಸಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಬಹಳ ಅಗತ್ಯವಾಗಿದೆ. ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಎಚ್‌ಐವಿ ಸೋಂಕು ಹಾಗೂ ಏಡ್ಸ್ ಕಾಯಿಲೆಯನ್ನು ತಡೆಗಟ್ಟಲು ಜನಸಾಮಾನ್ಯರಲ್ಲಿ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಟಿ.ಪಿ.ರಾಮಲಿಂಗೇಗೌಡ ತಿಳಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂದು ಕರೆಯಲಾಗುತ್ತದೆ, ಏಕೆಂದರೆ ಆರೋಗ್ಯವಿದ್ದರೆ ಏನನ್ನಾದರೂ ಸಾಧಿಸ ಬಹುದು. ಆರೋಗ್ಯವಿಲ್ಲದಿದ್ದರೆ ಏನೇ ಸಾಧಿಸಿದರು ಪ್ರಯೋಜನವಿಲ್ಲ. ಸಮಾಜದಲ್ಲಿ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವುದು ಆಡಳಿತಾಂಗದ ಹೊಣೆ ಎಂದರು.ಜನರಲ್ಲಿ ಅರಿವು ಮೂಡಿಸಿ
‘ಎಚ್.ಐ.ವಿ ಸೋಂಕು ಹಾಗೂ ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸುವುದು’ ಈ ವರ್ಷದ ಘೋಷವಾಕ್ಯವಾಗಿದೆ. ಅಡೆತಡೆಗಳನ್ನು ನಿಯಂತ್ರಿಸಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಬಹಳ ಅಗತ್ಯವಾಗಿದೆ. ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು ಎಂದು ತಿಳಿಸಿದರು.ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್ ಮಾತನಾಡಿ, ಏಡ್ಸ್ ಕುರಿತು ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದ್ದ ಪರಿಣಾಮವಾಗಿ ಜಿಲ್ಲೆಯಲ್ಲಿ ಎಚ್ ಐವಿ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ ಎಂದು ತಿಳಿಸಿದರು. ಪ್ರತಿಜ್ಞಾ ವಿಧಿ ಬೋಧನೆ
ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಶಿಲ್ಪಾ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ವೇಳೆ ಏಡ್ಸ್ ನ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಡಿ.ಟಿ ಉಮಾ, ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಸಂತೋಷ್ ಬಾಬು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್ , ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ವಿದ್ಯಾರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬಂದಿ ಇದ್ದರು.