ಬಸವರಾಜುಗೆ ವಿಪ ಟಿಕೆಟ್ ನೀಡಿ

| Published : May 26 2024, 01:32 AM IST

ಸಾರಾಂಶ

ನಾಯಕ ಸಮಾಜದ ಹಿರಿಯ ಮುಖಂಡರು ಹಾಗೂ ಜಿಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡ ಎಸ್.ಸಿ. ಬಸವರಾಜು ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಾಯಕ ಸಮಾಜದ ಹಿರಿಯ ಮುಖಂಡರು ಹಾಗೂ ಜಿಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡ ಎಸ್.ಸಿ. ಬಸವರಾಜು ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕೆಂದು ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

೧೯೮೭ರಿಂದ ಸಕ್ರಿಯ ರಾಜಕಾರಣದಲ್ಲಿರುವ ಎಚ್.ಸಿ. ಬಸವರಾಜು ಅವರು ಮೈಸೂರು ಜಿಪಂ ಅಧ್ಯಕ್ಷರಾಗಿ, ಮೂರು ಬಾರಿ ಜಿಪಂ ಸದಸ್ಯರಾಗಿ ಉತ್ತಮ ಸೇವೆ ಸಲ್ಲಿಸುವ ಜೊತೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ಚಿರ ಪರಿಚಿತರು. ೧೯೮೭ರಲ್ಲಿ ಪ್ರಥಮ ಜಿಲ್ಲಾ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ರಾಜಕೀಯ ಜೊತೆಗೆ ಸಹಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಮೂಲಕ ಮೈಸೂರು- ಚಾಮರಾಜನಗರ ಪ್ರಾಂತ್ಯದಲ್ಲಿ ನಾಯಕ ಸಮಾಜದ ಅತ್ಯಂತ ಪ್ರಭಾವಿ ನಾಯಕರಾಗಿದ್ದಾರೆ. ಕಳೆದ ೨೦೧೩-೧೮ರ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿ, ಸರ್ಕಾರ ಹಾಗೂ ಸಮುದಾಯಕ್ಕೆ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿ ರಾಜ್ಯಾದ್ಯಂತ ಬಸವರಾಜು ಜನಪ್ರಿಯತೆಯನ್ನು ಹೊಂದಿದ್ದಾರೆ. ಜೊತೆಗೆ ಹಲವಾರು ವರ್ಷಗಳಿಂದ ಪಕ್ಷ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದಾರೆ. ಈ ಭಾಗದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ತಮ್ಮದೇ ಅದ ಸೇವೆ ಸಲ್ಲಿದ್ದಾರೆ. 2 ಬಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿ ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಿದ್ದಾರೆ. ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ನಾಯಕ ಜನಾಂಗ ಪ್ರಭಾವಿ ಮುಖಂಡರಾಗಿರುವ ಬಸವರಾಜು ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನ ನೀಡಿದರೆ ಈ ಭಾಗದಲ್ಲಿ ಹೆಚ್ಚು ಅನುಕೂಲವಾಗಲಿದೆ. ಮುಂಬರುವ ಜಿಪಂ, ತಾಪಂ ಚುನಾವಣೆಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ನಾಯಕ ಸಮುದಾಯದ ಮತಗಳು ಗಣನೀಯ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬರುವ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಬಲಿಷ್ಠಗೊಳಿಸಲು ಸಹಕಾರಿಯಾಗುತ್ತದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ವಿಧಾನ ಪರಿಷತ್‌ಗೆ ನಾಯಕ ಸಮಾಜದ ಚಿಕ್ಕಮಾಧು ಅವರು ಜೆಡಿಎಸ್‌ನಿಂದ ಸಿದ್ದರಾಜು ಅವರು ಬಿಜೆಪಿಯಿಂದ ನಾಮಕರಣವಾಗಿದ್ದರು. ಈಗ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಸವರಾಜು ಅವರಿಗೆ ಅವಕಾಶ ಮಾಡಿಕೊಡಿ ಎಂದು ಚಂದ್ರು ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ , ಡಿಸಿಎಂ, ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೆ. ವೆಂಕಟೇಶ್ , ಸಚಿವರಾದ ಸತೀಶ್ ಚಾರಕಿಹೊಳಿ, ಕೆ.ಎಲ್. ರಾಜಣ್ಣ ಹಾಗೂ ಎರಡು ಜಿಲ್ಲೆಯ ಶಾಸಕರು, ಎಸ್.ಸಿ. ಬಸವರಾಜು ಅವರಿಗೆ ಅವಕಾಶ ಮಾಡಿಕೊಟ್ಟರೆ ಹೆಚ್ಚಿನ ಅನುಕೂಲವಾಗಿದೆ ಎಂದು ಸಿಎಂಗೆ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊಂಗನೂರು ಎಚ್.ವಿ. ಚಂದ್ರು ಮನವಿ ಮಾಡಿದ್ದಾರೆ.