ಸಾರಾಂಶ
ನಮಗೆ ಮೊದಲೆ ಕುಡಿಯುವ ನೀರು ಕೊಡಿ, ಆಮೇಲೆ ಚುನಾವಣೆಯಲ್ಲಿ ಗೆಲ್ಲಲು ಮತ ಕೇಳಲು ಬನ್ನಿ ಎಂದು ತಾಲ್ಲೂಕಿನ ಟಿ. ನುಲೇನೂರು ಗ್ರಾಮಸ್ಥರು ತಮ್ಮ ಆಗ್ರಹವನ್ನು ಮುಂದಿಟ್ಟಿದ್ದಾರೆ.
ಹೊಳಲ್ಕೆರೆ: ನಮಗೆ ಮೊದಲೆ ಕುಡಿಯುವ ನೀರು ಕೊಡಿ, ಆಮೇಲೆ ಚುನಾವಣೆಯಲ್ಲಿ ಗೆಲ್ಲಲು ಮತ ಕೇಳಲು ಬನ್ನಿ ಎಂದು ತಾಲ್ಲೂಕಿನ ಟಿ. ನುಲೇನೂರು ಗ್ರಾಮಸ್ಥರು ತಮ್ಮ ಆಗ್ರಹವನ್ನು ಮುಂದಿಟ್ಟಿದ್ದಾರೆ.
ಕಳೆದ ಹತ್ತಾರು ದಿನಗಳಿಂದ ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಗ್ರಾಮಸ್ಥರು ನಮ್ಮ ಊರಿಗೆ ನೀರಿನ ವ್ಯವಸ್ಥೆ ಆಗದೇ ಇದ್ದರೆ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.ನಮ್ಮ ಊರಿನ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳ ಗಮನ ಸೆಳೆಯಲು ಗ್ರಾಮ ಪಂಚಾಯ್ತಿ ಮುಂದೆ ಖಾಲಿ ಕೊಡಗಳ ಪ್ರದರ್ಶನ ಮಾಡಿದ್ದೇವೆ. ಕೂಡಲೇ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಗ್ರಾಮದ ಬಹುತೇಕ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲೊಂಡು ಗ್ರಾಮ ಪಂಚಾಯ್ತಿ ಕಚೇರಿ ಮುಂದೆ ಖಾಲಿ ಕೊಡಗಳನ್ನಿಟ್ಟು ಪ್ರತಿಭಟನೆ ನಡೆಸಿದರು.