ಹರಪನಹಳ್ಳಿ: ಪಂಚಗಣಾಧೀಶರರ ಐತಿಹಾಸಿಕ ಹಿನ್ನೆಲೆಯುಳ್ಳ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ರಥೋತ್ಸವವು ಶುಕ್ರವಾರ ಸಂಜೆ ಅಪಾರ ಭಕ್ತರ ಮಧ್ಯೆ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಜರುಗಿದ್ದು, ಲಕ್ಷಾಂತರ ಭಕ್ತರು ರಥೋತ್ಸವವನ್ನು ಕಣ್ಮುಂಬಿಕೊಂಡರು.
ಊರ ಹೊರವಲಯದಲ್ಲಿ ನಿರ್ಮಿಸಿದ್ದ ಆಕರ್ಷಕ ರಥಕ್ಕೆ ಕೆಂಪು, ಬಿಳಿ ಸೇರಿದಂತೆ ವಿವಿಧ ಬಣ್ಣಗಳ ಬಾವುಟ ಹಾಗೂ ಹಲವು ದೇವಾನುದೇವತೆಗಳ ಭಾವಚಿತ್ರ ಅಳವಡಿಕೆಯ ಜತೆಗೆ, ಬಾಳೆದಿಂಡು, ಮಾವಿನ ತೋರಣ ಹಾಗೂ ಪುಷ್ಪ ಮಾಲೆಯೊಂದಿಗೆ ಅಲಂಕರಿಸಲಾಗಿತ್ತು.ಮಠದ ಪೀಠಾಧಿಪತಿ ಪಟ್ಟದ ಚಿನ್ಮಯ ಸ್ವಾಮೀಜಿ ನೇತೃತ್ವದಲ್ಲಿ ಬಿರುದಾವಳಿ ಮೂಲಕ ಸಕಲ ವಾದ್ಯತಂಡಗಳ ಭಾಜ -ಭಜಂತ್ರಿಯೊಂದಿಗೆ ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿ ನಂತರ ದೇಗುಲದಲ್ಲಿನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿಕೊಂಡು ಮೆರವಣಿಗೆ ಹೊರಟಿತು.
ರಥವನ್ನು ಐದು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಗೋಣಿಬಸವೇಶ್ವರರ ಪಟ(ಧ್ವಜ)ವನ್ನು ಬಹಿರಂಗ ಹರಾಜು ಮಾಡಲಾಯಿತು. ನೀಲಗುಂದದ ಅಜ್ಜಯ್ಯರ ನಾಗಪ್ಪನವರು ₹4 ಲಕ್ಷದ 51 ಸಾವಿರಕ್ಕೆ ಪಟವನ್ನು ಪಡೆದರು. ಕೊಟ್ಟೂರೇಶ್ವರ ಉತ್ಸವ ಮೂರ್ತಿಯನ್ನು ರಥಮಂಟಪದಲ್ಲಿ ಪ್ರತಿಷ್ಠಾಪಿಸುವ ಮೂಲಕ ಅರ್ಚಕರು ಮಹಾ ಮಂಗಳಾರತಿ ನೆರವೇರಿಸುತ್ತಿದ್ದಂತಿಯೇ ಭರ್ಜರಿ ಜಯಘೋಷಗಳ ನಡುವೆ ರಥೋತ್ಸವಕ್ಕೆ ಉತ್ತರಾಭಿಮುಖವಾಗಿ ಚಾಲನೆ ನೀಡಲಾಯಿತು.ಹರಕೆ ಹೊತ್ತಿದ್ದ ಭಕ್ತರು, ರಥಕ್ಕೆ ತೆಂಗಿನಕಾಯಿ, ಬಾಳೇಹಣ್ಣು ಹಾಗೂ ಮೆಣಸು ತೂರಿ ಹರಕೆ ಸಮರ್ಪಿಸಿದರು. ಚಿತ್ರದುರ್ಗ,ದಾವಣಗೆರೆ, ಬಳ್ಳಾರಿ, ಗದಗ, ಹಾಗೂ ಹಾವೇರಿ ಜಿಲ್ಲೆಗಳು ಸೇರಿದಂತೆ ನಾಡಿನಾದ್ಯಂತ ಭಕ್ತ ಸಾಗರವೇ ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.
ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಉಪವಿಭಾಗಾಧಿಕಾರಿ ಸುರೇಶ ಕುಮಾರ, ಪಿಕಾರ್ಡ ಬ್ಯಾಂಕ್ ಅದ್ಯಕ್ಷ ಲಾಟಿದಾದಾಪೀರ, ತಾ.ಪಂ ಮಾಜಿ ಸದಸ್ಯರಾದ ಮೈದೂರು ರಾಮಣ್ಣ, ಹುಲ್ಲಿಕಟ್ಟಿ ಚಂದ್ರಪ್ಪ, ವಿವಿಎಸ್ ಎನ್ ಅಧ್ಯಕ್ಷ ಸೋಮನಾಥ ಬಂಡ್ರಿ, ಎಲ್.ಮಂಜನಾಯ್ಕ, ಡಿವೈಎಸ್ಪಿ ಸಂತೋಷ ಚವ್ಹಾಣ ನೇತೃತ್ವದಲ್ಲಿ ಸಿಪಿಐಗಳಾದ ಮಹಾಂತೇಶ ಸಜ್ಜನ, ಸೋಮ್ಲನಾಯ್ಕ, ಮಲ್ಲಪ್ಪ, ರಾಜೇಶ, ಫೈಜುಲ್ಲಾ, 13 ಪಿಎಸ್ಐಗಳು, 156 ಪೋಲೀಸರು 20 ಮಹಿಳಾ ಪೋಲೀಸರು, 96 ಗೃಹ ರಕ್ಷಕದಳದವರು ಬಂದೋಬಸ್ತ್ ಕೈಗೊಂಡಿದ್ದರು.
ಊರ ಹೊರವಲಯದಲ್ಲಿ ನಿರ್ಮಿಸಿದ್ದ ಆಕರ್ಷಕ ರಥಕ್ಕೆ ಕೆಂಪು, ಬಿಳಿ ಸೇರಿದಂತೆ ವಿವಿಧ ಬಣ್ಣಗಳ ಬಾವುಟ ಹಾಗೂ ಹಲವು ದೇವಾನುದೇವತೆಗಳ ಭಾವಚಿತ್ರ ಅಳವಡಿಕೆಯ ಜತೆಗೆ, ಬಾಳೆದಿಂಡು, ಮಾವಿನ ತೋರಣ ಹಾಗೂ ಪುಷ್ಪ ಮಾಲೆಯೊಂದಿಗೆ ಅಲಂಕರಿಸಲಾಗಿತ್ತು.
ಮಠದ ಪೀಠಾಧಿಪತಿ ಪಟ್ಟದ ಚಿನ್ಮಯ ಸ್ವಾಮೀಜಿ ನೇತೃತ್ವದಲ್ಲಿ ಬಿರುದಾವಳಿ ಮೂಲಕ ಸಕಲ ವಾದ್ಯತಂಡಗಳ ಭಾಜ -ಭಜಂತ್ರಿಯೊಂದಿಗೆ ಕೊಟ್ಟೂರೇಶ್ವರ ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿ ನಂತರ ದೇಗುಲದಲ್ಲಿನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿಕೊಂಡು ಮೆರವಣಿಗೆ ಹೊರಟಿತು.ರಥವನ್ನು ಐದು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಗೋಣಿಬಸವೇಶ್ವರರ ಪಟ(ಧ್ವಜ)ವನ್ನು ಬಹಿರಂಗ ಹರಾಜು ಮಾಡಲಾಯಿತು. ನೀಲಗುಂದದ ಅಜ್ಜಯ್ಯರ ನಾಗಪ್ಪನವರು ₹4 ಲಕ್ಷದ 51 ಸಾವಿರಕ್ಕೆ ಪಟವನ್ನು ಪಡೆದರು. ಕೊಟ್ಟೂರೇಶ್ವರ ಉತ್ಸವ ಮೂರ್ತಿಯನ್ನು ರಥಮಂಟಪದಲ್ಲಿ ಪ್ರತಿಷ್ಠಾಪಿಸುವ ಮೂಲಕ ಅರ್ಚಕರು ಮಹಾ ಮಂಗಳಾರತಿ ನೆರವೇರಿಸುತ್ತಿದ್ದಂತಿಯೇ ಭರ್ಜರಿ ಜಯಘೋಷಗಳ ನಡುವೆ ರಥೋತ್ಸವಕ್ಕೆ ಉತ್ತರಾಭಿಮುಖವಾಗಿ ಚಾಲನೆ ನೀಡಲಾಯಿತು.
ಹರಕೆ ಹೊತ್ತಿದ್ದ ಭಕ್ತರು, ರಥಕ್ಕೆ ತೆಂಗಿನಕಾಯಿ, ಬಾಳೇಹಣ್ಣು ಹಾಗೂ ಮೆಣಸು ತೂರಿ ಹರಕೆ ಸಮರ್ಪಿಸಿದರು. ಚಿತ್ರದುರ್ಗ,ದಾವಣಗೆರೆ, ಬಳ್ಳಾರಿ, ಗದಗ, ಹಾಗೂ ಹಾವೇರಿ ಜಿಲ್ಲೆಗಳು ಸೇರಿದಂತೆ ನಾಡಿನಾದ್ಯಂತ ಭಕ್ತ ಸಾಗರವೇ ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಉಪವಿಭಾಗಾಧಿಕಾರಿ ಸುರೇಶ ಕುಮಾರ, ಪಿಕಾರ್ಡ ಬ್ಯಾಂಕ್ ಅದ್ಯಕ್ಷ ಲಾಟಿದಾದಾಪೀರ, ತಾ.ಪಂ ಮಾಜಿ ಸದಸ್ಯರಾದ ಮೈದೂರು ರಾಮಣ್ಣ, ಹುಲ್ಲಿಕಟ್ಟಿ ಚಂದ್ರಪ್ಪ, ವಿವಿಎಸ್ ಎನ್ ಅಧ್ಯಕ್ಷ ಸೋಮನಾಥ ಬಂಡ್ರಿ, ಎಲ್.ಮಂಜನಾಯ್ಕ, ಡಿವೈಎಸ್ಪಿ ಸಂತೋಷ ಚವ್ಹಾಣ ನೇತೃತ್ವದಲ್ಲಿ ಸಿಪಿಐಗಳಾದ ಮಹಾಂತೇಶ ಸಜ್ಜನ, ಸೋಮ್ಲನಾಯ್ಕ, ಮಲ್ಲಪ್ಪ, ರಾಜೇಶ, ಫೈಜುಲ್ಲಾ, 13 ಪಿಎಸ್ಐಗಳು, 156 ಪೋಲೀಸರು 20 ಮಹಿಳಾ ಪೋಲೀಸರು, 96 ಗೃಹ ರಕ್ಷಕದಳದವರು ಬಂದೋಬಸ್ತ್ ಕೈಗೊಂಡಿದ್ದರು.