ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ‘ವಿಕ್ಟರಿ 2026’ ಅಂತರ್ಶಾಲಾ ಸ್ಪರ್ಧೆಯಲ್ಲಿ ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿದ್ದಾರೆ.
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ‘ವಿಕ್ಟರಿ 2026’ ಅಂತರ್ಶಾಲಾ ಸ್ಪರ್ಧೆಯಲ್ಲಿ ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿದ್ದಾರೆ.ಇಲ್ಲಿನ ವಿದ್ಯಾರ್ಥಿಗಳು ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ, ಚಿತ್ರಕಲೆಯಲ್ಲಿ ಪ್ರಥಮ, ವಿಜ್ಞಾನ ಮಾದರಿ ತಯಾರಿಕೆಯಲ್ಲಿ ಪ್ರಥಮ ಹಾಗೂ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದರು. ಅಕ್ಷರ ಮುದ್ರಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು, ನಿಧಿ ಶೋಧ ಸ್ಪರ್ಧೆಯಲ್ಲಿ ವಿಶೇಷ ಬಹುಮಾನವನ್ನು ತಮ್ಮದಾಗಿಸಿಕೊಂಡರು.
ವಿವಿಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತೋರಿದ ಅದ್ಭುತ ಪ್ರತಿಭೆ ಮತ್ತು ಸಾಧನೆಯ ಫಲವಾಗಿ ಶಾಲೆಯು ಸಮಗ್ರ ಚಾಂಪಿಯನ್ ಪ್ರಶಸ್ತಿಯೊಂದಿಗೆ 12,222 ರು. ನಗದು ಬಹುಮಾನ ಪಡೆದುಕೊಂಡರು.ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದರು.