ಸಾರಾಂಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಾಲೂಕಿನ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನಿಯೋಜಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆಂದು ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ತಿಪಟೂರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಾಲೂಕಿನ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನಿಯೋಜಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದಾರೆಂದು ತಾಲೂಕು ಯೋಜನಾಧಿಕಾರಿ ಕೆ. ಉದಯ್ ತಿಳಿಸಿದರು.ನಗರದ ಯೋಜನಾಧಿಕಾರಿಗಳ ಕಚೇರಿಯಲ್ಲಿ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ಹಸ್ತಾಂತರಿಸಿ ಮಾತನಾಡಿದ ಅವರು, ತಾಲೂಕಿನ ಕನ್ನಡ ಭಾರತಿ ಶಾಲೆ ಹೊನ್ನವಳ್ಳಿ, ಎಸ್‌ಎಲ್‌ಬಿಎಸ್ ಪ್ರೌಢಶಾಲೆ ಸಾರ್ಥವಳ್ಳಿ, ಜಿವಿಪಿ ಪ್ರೌಢಶಾಲೆ ಕಾಮಸಮುದ್ರ ಈ ಶಾಲೆಗಳಿಗೆ ಸಮುದಾಯ ಅಭಿವೃದ್ದಿ ವಿಭಾಗದಿಂದ ಶಿಕ್ಷಕರನ್ನು ನಿಯೋಜಿಸಲಾಗಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಹಿತದೃಷ್ಟಯಿಂದ ನಮ್ಮ ಯೋಜನೆಯ ಪಾಲುದಾರ ಬಂಧುಗಳ ಮಕ್ಕಳು ವೃತ್ತಿಪರ ಕೋರ್ಸ್‌ಗಾಗಿ ಸುಜ್ಞಾನ ನಿಧಿ ಶಿಷ್ಯ ವೇತನ, ಶಾಲೆಗಳಲ್ಲಿ ದುಶ್ಚಟ ದುರಭ್ಯಾಸದಿಂದ ದೂರವಿರುವ ಸ್ವಾಸ್ಥ್ಯ ಸಂಕಲ್ಪ, ಶಾಲೆಗಳಿಗೆ ಬೆಂಚು, ಡೆಸ್ಕ್ ಸೌಲಭ್ಯ, ಶಾಲಾ ಕೊಠಡಿ, ಮೈದಾನ ರಚನೆ, ಟ್ಯೂಷನ್ ಕ್ಲಾಸ್ ಹೀಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ವಿದ್ಯಾರ್ಥಿಗಳು ಸದ್ವಿನಿಯೋಗಪಡಿಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕೆಂದರು.