ಜ್ಞಾನ ಬಂಡಾರ ವೃದ್ಧಿಸಿಕೊಳ್ಳಿ ಮುಂದಾಗಿ

| Published : Sep 29 2024, 01:37 AM IST

ಸಾರಾಂಶ

ರಾಮನಗರ: ಜ್ಞಾನ ಬಂಡಾರ ವೃದ್ಧಿಸಿಕೊಳ್ಳಲು ಪುಸ್ತಕಗಳನ್ನು ಓದುವ ಜೊತೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕು. ಅಲ್ಲಿನ ಇತಿಹಾಸದ ಕುರಿತು ತಿಳಿದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.

ರಾಮನಗರ: ಜ್ಞಾನ ಬಂಡಾರ ವೃದ್ಧಿಸಿಕೊಳ್ಳಲು ಪುಸ್ತಕಗಳನ್ನು ಓದುವ ಜೊತೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕು. ಅಲ್ಲಿನ ಇತಿಹಾಸದ ಕುರಿತು ತಿಳಿದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.

ತಾಲೂಕಿನ ಗೋಪಾಲಪುರ ಗ್ರಾಮದ ಸ್ವಾಮಿ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರಿನ ಚೇತನ ಸಂಸ್ಥೆ ಹಾಗೂ ರಾಮನಗರ ಟೂರಿಸಂ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಮನಗರ ಜಿಲ್ಲೆ ಬೆಂಗಳೂರು ಸಮೀಪದಲ್ಲಿರುವ ಕಾರಣ ಇಲ್ಲಿನ ಪ್ರವಾಸಿ ತಾಣಗಳಿಗೆ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ಅತೀ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಇದರಿಂದ ಶೇ.50 ರಷ್ಟು ಆದಾಯವು ಬರುತ್ತಿದೆ ಎಂದು ತಿಳಿಸಿದರು.

ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದರಿಂದ ದೈಹಿಕ ವ್ಯಾಯಾಮ ಹಾಗೂ ಮಾನಸಿಕವಾಗಿ ನೆಮ್ಮದಿ ಸಿಗುತ್ತದೆ ಎಂದ ಅವರು, ಸರ್ಕಾರದ ಜೊತೆ ಖಾಸಗಿ ಸಂಸ್ಥೆಗಳು ಒಗ್ಗೂಡಿದರೆ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳು ಮತ್ತಷ್ಟು ಅಭಿವೃದ್ಧಿ ಹೊಂದುತ್ತವೆ ಎಂದರು.

ರಾಮನಗರ ಟೂರಿಸಂ ಸೂಸೈಟಿ ಅಧ್ಯಕ್ಷ ವಿಜಯದೇವ್ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಚಾರಣ ಹಾಗೂ ಶಿಲಾರೋಹಣಕ್ಕೆ ಅಪರ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರವಿ ಕುಮಾರ್, ಮಾಯಗಾನಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೆಂಕಟೇಶಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್, ಅಗ್ನಿಶಾಮಕ ಅಧಿಕಾರಿ ಮೋಹನ್ ಮುದಿಗೌಡ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ಮಾಲೀಕರು, ಚೇತನಾ ಸಂಸ್ಥೆ ಚಾರಣಪ್ರಿಯರು ಹಾಗೂ ಪ್ರವಾಸಿ ಮಿತ್ರರು ಭಾಗವಹಿಸಿದ್ದರು.