ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಕಲಿಸಿದಾಗ ದುಶ್ಚಟಗಳಿಂದ ದೂರ ಇರುತ್ತಾರೆ. ಶಾಲಾ ಕಾಲೇಜುಗಳಲ್ಲಿ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ದುಶ್ಚಟಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್.ಡಿ. ಹೇಳಿದರು.ನಗರದ ಶ್ರೀ ಮಾಧವ ವಿದ್ಯಾ ಮಂದಿರ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಧ್ಯವರ್ಜನ ಶಿಬಿರಗಳನ್ನು ನಡೆಸುವ ಮೂಲಕ ಸಾವಿರಾರು ಮಧ್ಯ ವ್ಯಸನಿಗಳನ್ನು ವ್ಯಸನ ಮುಕ್ತರಾಗಿ ಉತ್ತಮ ಜೀವನವನ್ನು ಕಲ್ಪಿಸುವ ಕಾರ್ಯ ಮಾಡಲಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಅನಂತಪದ್ಮನಾಭ, ಮಾಧವ ವಿದ್ಯಾಮಂದಿರದ ಆಡಳಿತ ಅಧಿಕಾರಿ ಹನುಮಂತರಾಯಪ್ಪ, ಶಾಲಾ ಸಮಿತಿ ಸದಸ್ಯ ಸೋಮಶೇಖರಯ್ಯ, ಜಯರಾಮ್, ಯೋಜನಾಧಿಕಾರಿ ರಮೇಶ್, ವಲಯದ ಮೇಲ್ವಿಚಾರಕ ನರೇಶ್, ಜ್ಞಾನ ವಿಕಾಸ ಸಮಾನ್ವಧಿಕಾರಿ ಆಶಾ, ಸೇವಾ ಪ್ರತಿನಿಧಿ ಭಾಗ್ಯ ಹಾಜರಿದ್ದರು.