ಸಾರಾಂಶ
ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಿರುವುದು ಖಂಡಿಸಿ, ಮಾಜಿ ಸಂಸದ ಬಿ.ವಿ ನಾಯಕ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ರಾಜಾ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಹೋರಾಟವನ್ನು ಶುಕ್ರವಾರ ಮಾಡಲಾಯಿತು.
ರಾಯಚೂರು: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಿರುವುದು ಖಂಡಿಸಿ, ಮಾಜಿ ಸಂಸದ ಬಿ.ವಿ ನಾಯಕ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ರಾಜಾ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಹೋರಾಟವನ್ನು ಶುಕ್ರವಾರ ಮಾಡಲಾಯಿತು.
ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಬಿ.ವಿ.ನಾಯಕ ಬೆಂಬಲಿಗರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವಿ.ನಾಯಕ ಅವರಿಗೆ ಕೊನೆಗಳಿಗೆಯಲ್ಲಿ ಕೈತಪ್ಪಿದ್ದು, ಆರಂಭದಲ್ಲಿ ಟಿಕೆಟ್ ನೀಡುವುದಾಗಿ ಬಿಜೆಪಿ ವರಿಷ್ಠರು ಹೇಳಿರುವುದರಿಂದ ಬಿ.ವಿ.ನಾಯಕ ಪ್ರಚಾರ ಕಾರ್ಯ ಆರಂಭಿಸಿದ್ದರು. ಈಗ ಅವರನ್ನು ಕಡೆಗಣಿಸಿ ಸಂಸದ ರಾಜಾ ಅಮರೇಶ್ವರ ನಾಯಕರಿಗೆ ಮತ್ತೊಮ್ಮೆ ಟಿಕೆಟ್ ನೀಡಿರುವುದು ಖಂಡನೀಯ ಸಂಗತಿಯಾಗಿದೆ ಎಂದು ಕಿಡಿಕಾರಿದರು. ಸಂಸದರಾಗಿ ಆಯ್ಕೆಯಾಗಿದ್ದ ರಾಜಾ ಅಮರೇಶ್ವರ ನಾಯಕ 5 ವರ್ಷ ಯಾವುದೇ ಕೆಲಸ ಮಾಡದೇ ಬಿಜೆಪಿ ಕಾರ್ಯಕರ್ತರು ಹಾಗೂ ಜನರಿಂದ ದೂರ ಇದ್ದ ರಾಜಾ ಅಮರೇಶ್ವರ ನಾಯಕ ಚುನಾವಣೆ ಘೋಷಣೆಯಾದ ಬಳಿಕ ಸಕ್ರೀಯರಾಗಿದ್ದಾರೆ ಎಂದು ಆರೋಪಿಸಿದರು. ಹೋರಾಟದಲ್ಲಿ ಬೆಂಬಲಿಗರು, ಅಭಿಮಾನಿಗಳು ಇದ್ದರು.